ಮಡಿಕೇರಿ ಜೂ.28 : ವೀರಾಜಪೇಟೆ ವಿದ್ಯುತ್ ಉಪ-ಕೇಂದ್ರದಿಂದ ಹೊರ ಹೋಗುವ ವೀರಾಜಪೇಟೆ ಫೀಡರ್‍ನಲ್ಲಿ ಹೊಸದಾಗಿ ಪರಿವರ್ತಕವನ್ನು ಅಳವಡಿಸುವದು ಹಾಗೂ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವದರಿಂದ ತಾ. 29 ರಂದು (ಇಂದು) ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು. ಮಟನ್ ಮಾರ್ಕೆಟ್ ಜಂಕ್ಷನ್, ಖಾಸಗಿ ಬಸ್ ನಿಲ್ದಾಣ, ಸುಣ್ಣದ ಬೀದಿ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.