ಮಡಿಕೇರಿ, ಜೂ. 28: ವೀರಾಜಪೇಟೆ ತಾಲೂಕು ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ ಸಾಮಾನ್ಯ ಮರಳನ್ನು ನ್ಯಾಯಾಲಯದ ಆದೇಶದಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆ, ತಹಶೀಲ್ದಾರರು ಹಾಗೂ ಪೊಲೀಸ್ ಇಲಾಖೆಯ ಸಮ್ಮುಖದಲ್ಲಿ ಜುಲೈ 3 ರಂದು ಬೆಳಿಗ್ಗೆ 11 ಗಂಟೆಗೆ ಶ್ರೀಮಂಗಲ ಪೊಲೀಸ್ ಠಾಣಾ ಆವರಣದಲ್ಲಿ ಹರಾಜು ನಡೆಸಲಾಗುವದು. ಆಸಕ್ತರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಈ ಕಚೇರಿ ದೂರವಾಣಿ ಸಂ: 08272-228523 ಯನ್ನು ಸಂಪರ್ಕಿಸಬಹುದು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ರೇಷ್ಮಾ ತಿಳಿಸಿದ್ದಾರೆ.