*ಗೋಣಿಕೊಪ್ಪಲು, ಜೂ. 28: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಮಿತಿಯ ಕೊಡಗು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ಎರಡನೇ ಅವಧಿಗೆ ಪಡಿಕಲ್ ಕುಸುಮಾವತಿ ಚಂದ್ರಶೇಖರ್ ಹಾಗೂ ರಾಜ್ಯ ಮಾನವ ಹಕ್ಕುಗಳ ಸಮಿತಿಯ ಉಪಾಧ್ಯಕ್ಷರಾಗಿ ಅಪ್ಪನೆರವಂಡ ಶಾಂತಿ ಅಚ್ಚಪ್ಪ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಸುಭಾಶ್ ನಗರದ ಭಟ್ಟರಹಳ್ಳಿ ಎಂ.ಬಿ. ಸಭಾಂಗಣದಲ್ಲಿ ನಡೆದ ನೂತನ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ಮಾನವ ಹಕ್ಕುಗಳ ಸಮಿತಿಯ ರಾಜ್ಯಾಧ್ಯಕ್ಷ ಕೃಷ್ಣ ಹೊಸಕೋಟೆಯವರ ನೇತೃತ್ವದಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ನಂತರ ಅಧ್ಯಕ್ಷರನ್ನು ಹಾಗೂ ರಾಜ್ಯ ಉಪಾಧ್ಯಕ್ಷರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭ ಬೆಂಗಳೂರು ಕೆ.ಆರ್. ಪುರಂ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎ ಬಸವರಾಜು ಹಾಜರಿದ್ದರು.