ಒಡೆಯನಪುರ, ಜೂ. 29: ಇಲ್ಲಿಗೆ ಸಮೀಪದ ಶನಿವಾರಸಂತೆ ಬಾಪೂಜಿ ಆಂಗ್ಲ ಮಾಧ್ಯಮ ಸಂಯುಕ್ತ ಪ್ರೌಢಶಾಲೆಯಲ್ಲಿ ವಿದ್ಯಾಸಂಸ್ಥೆ ವತಿಯಿಂದ ವಿದ್ಯಾರ್ಥಿಗಳಿಗೆ ಸ್ವಾಗತ ದಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಸ್ವಾಗತ ದಿನ ಸಮಾರಂಭದಲ್ಲಿ ವಿದ್ಯಾಸಂಸ್ಥೆ ಮುಖ್ಯ ಶಿಕ್ಷಕಿ ವಾಣಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ಶಾಲಾ ಶೈಕ್ಷಣಿಕ ತರಗತಿಯ ಹಂತದಲ್ಲಿ ಪಠ್ಯ ಮತ್ತು ಪಠ್ಯೇತರ ಕಾರ್ಯ ಚಟುವಟಿಕೆಗಳನ್ನು ಅಳವಡಿಸಿಕೊಂಡು ಪ್ರಗತಿ ಸಾಧಿಸುವಂತೆ ಸಲಹೆ ನೀಡಿದರು. ವಿದ್ಯಾರ್ಥಿಗಳಲ್ಲಿ ಕಲಿಕೆಯ ಸಂದರ್ಭದಲ್ಲಿ ಏಕಾಗೃತೆ, ಶ್ರದ್ಧೆ ಮುಂತಾದ ಮನೋಭಾವನೆಯನ್ನು ಅಳವಡಿಸಿಕೊಂಡರೆ ಶಿಕ್ಷಣದಲ್ಲಿ ಉತ್ತಮ ಪ್ರಗತಿ ಕಾಣಬಹುದು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗೆ ಸಮಾನ ಆದ್ಯತೆ ಕೊಡುವದರ ಮೂಲಕ ಶಾಲೆಗೆ ಕೀರ್ತಿ ತಂದುಕೊಡುವಂತೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಹಿರಿಯ ಶಿಕ್ಷಕ ದೇವರಾಜಪ್ಪ, ಸಹ ಶಿಕ್ಷಕಿ ಮಂಗಳ ವಿದ್ಯಾಸಂಸ್ಥೆ ಸಿಬ್ಬಂದಿ ಮತ್ತು ಶಿಕ್ಷಕರ ವರ್ಗ ಉಪಸ್ಥಿತರಿದ್ದರು. ಸ್ವಾಗತ ದಿನದ ಅಂಗವಾಗಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.