ವೀರಾಜಪೇಟೆ: ಜೂ. 29: ವಿರಾಜಪೇಟೆ ಶಾಸಕರ ಭವನದಲ್ಲಿ ಸುಮಾರು 47 ಮಂದಿ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಉಚಿತ ಅನಿಲ ಸಂಪರ್ಕ ಕಿಟ್‍ನ್ನು ಶಾಸಕ ಕೆ.ಜಿ. ಬೋಪಯ್ಯ ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಮೂಕೊಂಡ ಶಶಿ ಸುಬ್ರಮಣಿ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಬೊಳ್ಳಚಂಡ ಸ್ಮಿತಾ ಪ್ರಕಾಶ್, ಪಟ್ಟಣ ಪಂಚಾಯಿತಿ ಸದಸ್ಯರಾದ ಹರ್ಷವರ್ಧನ, ಆಶಾ ಸುಬ್ಬಯ್ಯ ಹಾಜರಿದ್ದರು.