ಸಿದ್ದಾಪುರ, ಜೂ. 29: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಾಲ್ದಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗಿ ಜ್ವರ ಹಾಗೂ ಚಿಕ್ಕನ್‍ಗುನ್ಯ ರೋಗಗಳ ಬಗ್ಗೆ ಅರಿವು ಕಾರ್ಯಕ್ರಮ ಮಾಲ್ದಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರು ಹಾಜರಿದ್ದರು.