ಒಡೆಯನಪುರ, ಜೂ. 29: ‘ವಿದ್ಯಾರ್ಥಿಗಳು ಪ್ರೌಢ ಮತ್ತು ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ಹಂತದಲ್ಲಿ ಮಾನವಿಯ ಮೌಲ್ಯಗಳ ಸಂಸ್ಕಾರವನ್ನು ಬೆಳೆಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ವ್ಯಕ್ತಿಯಾಗಲು ಸಾಧ್ಯವಾಗುತ್ತದೆ’ ಎಂದು ಶನಿವಾರಸಂತೆ ಭಾರತಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಇ.ಎಂ. ದಯಾನಂದ್ ಅಭಿಪ್ರಾಯಪಟ್ಟರು. ಅವರು ಶನಿವಾರಸಂತೆ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಿಂದ ಕಿರಿಯ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಪ್ರೌಢಶಾಲಾ ವಿಭಾಗದ ಹಿರಿಯ ಸಹ ಶಿಕ್ಷಕ ಪಿ.ನರಸಿಂಹಮೂರ್ತಿ ಮಾತನಾಡಿ-ಪ್ರೌಢ ಶಿಕ್ಷಣ ಮುಗಿದ ನಂತರ ಪದವಿ ಪೂರ್ವ ಶಿಕ್ಷಣಕ್ಕೆ ಕಾಲಿಡುವ ವಿದ್ಯಾರ್ಥಿಗಳಲ್ಲಿ ಹಿರಿಯ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರುಗಳ ಮಧ್ಯೆ ಪರಿಚಯ ಸಲುವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾರೆ ಎಂದರು..

ಪ.ಪೂ.ಕಾಲೇಜು ಪ್ರಾಂಶುಪಾಲ ಎಸ್.ಜೆ.ಅಶೋಕ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪ್ರಥಮ ದರ್ಜೆ, ಪ.ಪೂ.ಕಾಲೇಜು, ಪ್ರೌಢಶಾಲಾ ವಿಭಾಗದ ಉಪನ್ಯಾಸಕ ಮತ್ತು ಶಿಕ್ಷಕ ವರ್ಗದವರು ಪಾಲ್ಗೊಂಡಿದ್ದರು. ಹಿರಿಯ ವಿದ್ಯಾರ್ಥಿನಿಯರು ಸ್ವಾಗತ ನೃತ್ಯದ ಮೂಲಕ ಕಿರಿಯ ವಿದ್ಯಾರ್ಥಿಗಳಿಗೆ ಸ್ವಾಗತ ಕೋರಿದರು.