ಗೋಣಿಕೊಪ್ಪ ವರದಿ, ಜೂ. 29: ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸಶಸ್ತ್ರ ಪೊಲೀಸ್ ಕಾನ್ಸ್ಟೆಬಲ್ ಹಾಗೂ ಸಿವಿಲ್ ಪೊಲೀಸ್ ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಿರುವ ಹಿನ್ನೆಲೆ ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಮಾಹಿತಿ ಕಾರ್ಯಾಗಾರ ತಾ. 28, 29 ಹಾಗೂ 30 ರಂದು ಪೊನ್ನಂಪೇಟೆ ಪೊಲೀಸ್ ಠಾಣಾ ಆವರಣದಲ್ಲಿ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗೆ 9480804957, 9480804959 ಸಂಪರ್ಕಿಸುವಂತೆ ಪೊನ್ನಂಪೇಟೆ ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ.