ಚೆಟ್ಟಳ್ಳಿ, ಜೂ. 29: ಇಲ್ಲಿನ ಚೆಟ್ಟಳ್ಳಿ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭ ಮಾತನಾಡಿದ ಶಾಲಾ ಆಡಳಿತ ಮಂಡಳಿಯ ಸಂಚಾಲಕ ಮುಳ್ಳಂಡ ರತ್ತು ಚಂಗಪ್ಪ, ಯೋಗ ಮಾಡುವದರಿಂದ ಆರೋಗ್ಯವಾಗಿರಲು ಸಾಧ್ಯ ಎಂದರು. ಆಡಳಿತ ಮಂಡಳಿ ಉಪಾಧ್ಯಕ್ಷ ದಿಲೀಪ್ ಅಪ್ಪಚ್ಚು, ಶಾಲಾ ಮುಖ್ಯೋಪಾಧ್ಯಾಯ ಜಿ.ಸಿ. ಸತ್ಯನಾರಾಯಣ, ಶಿಕ್ಷಕರದಾ ತಿಲಕ, ಪ್ರಸನ್ನ, ಸುನಂದಾ, ಫಸೀಲ, ನೂತನ, ಮನೋಜ್ ಇದ್ದರು.