ಮಡಿಕೇರಿ, ಜೂ. 29 : ಮೂರ್ನಾಡಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾ. 28ರಂದು ಪ್ರಥಮ ಬಿ.ಕಾಂ.ನ ಹೊಸ ಮುಖಗಳಿಗೆ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಮೂರ್ನಾಡು ವಿದ್ಯಾಸಂಸ್ಥೆಯ ಅಧ್ಯಕ್ಷ ಬಾಚೇಟ್ಟಿರ ಜಿ ಮಾದಪ್ಪ ಮಾತನಾಡಿ ವಿದ್ಯಾರ್ಥಿಗಳು ವಿದ್ಯಾಸಂಸ್ಥೆಯ ಘನತೆ, ಉತ್ತಮ ನಡತೆ ಮತ್ತು ಶಿಸ್ತು ಮೈಗೂಡಿಸಿಕೊಳ್ಳುವಂತೆ ಹೇಳಿದರು.

ವಿದ್ಯಾಸಂಸ್ಥೆಯ ನೂತನ ಕಾರ್ಯದರ್ಶಿ ಪೆಮ್ಮುಡಿಯಂಡ ವೇಣು ಅಪ್ಪಣ್ಣ ವಿದ್ಯಾರ್ಥಿಗಳಲ್ಲಿ ವಿನಯ ಬಹು ಮುಖ್ಯ ಎಂದು ಕಿವಿ ಮಾತು ಹೇಳಿದರು.

ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಟ್ಟಡ ಪೂವಣ್ಣ ಮಾತನಾಡಿ ಕಾಲೇಜಿನ ನೀತಿ ನಿಯಮಗಳ ಬಗ್ಗೆ ವಿವರಿಸಿದರು.

iÀುಶೋದ ಕಾರ್ಯಕ್ರಮ ನಿರೂಪಿಸಿ, ನಾಜೀಮ ಸ್ವಾಗತ ಕೋರಿದರೆ, ಗೌರಮ್ಮ ವಂದಿಸಿದರು.