ಸೋಮವಾರಪೇಟೆ, ಜೂ. 30: ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ವತಿಯಿಂದ ಕುಶಾಲನಗರದಲ್ಲಿ ವಿಶ್ವ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಂಗವಾಗಿ ಸ್ಥಳಿಯ ಅನುಗ್ರಹ ಕಾಲೇಜು ವಿದ್ಯಾರ್ಥಿಗಳು ಮತ್ತು ಆರೋಗ್ಯ ಇಲಾಖೆ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಜಾಗೃತಿ ಜಾಥಾದಲ್ಲಿ ಪಾಲ್ಗೊಂಡಿದ್ದರು.
ಪ್ರಬಾರ ತಾಲೂಕು ಆರೋಗ್ಯಾಧಿಕಾರಿ ಡಾ.ಚೇತನ್ ಜಾಥಾಗೆ ಚಾಲನೆ ನೀಡಿದರು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ, ಹಿರಿಯ ಆರೋಗ್ಯ ಸಹಾಯಕ ನಾಗೇಂದ್ರಾಚಾರ್, ದಮಯಂತಿ ಮತ್ತಿತರರು ಇದ್ದರು.