ಕೂಡಿಗೆ, ಜೂ.30: ಕಾವೇರಿ ನೀರಾವರಿ ನಿಗಮ ವತಿಯಿಂದ ವಿಶೇಷ ಘಟಕ ಯೋಜನೆಯ ಅಡಿಯಲ್ಲಿ ರೂ. 36 ಲಕ್ಷದ ಕಾಮಗಾರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಎಂ. ಪಿ. ಅಪ್ಪಚು ರಂಜನ್ ಭೂಮಿ ಪೂಜೆ ನೆರವೇರಿಸಿದರು. ಬ್ಯಾಡಗೂಟ್ಟ ಗ್ರಾಮದಿಂದ. ಸೀಗೆಹೊಸೂರುವರೆಗೆ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು. ಬಹುದಿನಗಳಿಂದ ಮುಖ್ಯ ಅವಶ್ಯಕತೆ ಇರುವ ಈ ರಸ್ತೆಗೆ ನೀರಾವರಿ ಇಲಾಖೆಯ ಹಣವನ್ನು ಮಂಜೂರು ಮಾಡಲಾಯಿತು. ಇದರಿಂದ ಸೋಮವಾರಪೇಟೆ ಸಂಪರ್ಕ ರಸ್ತೆಗೆ ಅನುಕೂಲವಾಗುತ್ತದೆ. ಮುಂದಿನ ದಿನಗಳಲ್ಲಿ ವಿಶೇಷ ಯೋಜನೆಯ ಅಡಿಯಲ್ಲಿ ಗ್ರಾಮಗಳ ಉಪ ರಸ್ತೆಗಳ ಕಾಮಗಾರಿಯನ್ನು ಅತಿ ಶೀಘ್ರದಲ್ಲಿ ಪ್ರಾರಂಭಿಸಲಾಗುವದು ಎಂದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಪ್ರೇಮಲೀಲಾ ಉಪಾಧ್ಯಕ್ಷ ಗಿರೀಶ್, ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರಾಜೇಗೌಡ, ಸಹಾಯಕ ಇಂಜಿನಿಯರ್ ನಾಗರಾಜ, ಕಿರಣ, ಕೆ.ಕೆ. ಬೋಗಪ್ಪ ಹಾಗೂ ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.