ಮಡಿಕೇರಿ, ಜೂ. 30: ಪ್ರಸಕ್ತ (2019-20) ಸಾಲಿಗೆ ಕೊಡಗು ಜಿಲ್ಲೆಯಲ್ಲಿನ ಮೊರಾರ್ಜಿ ದೇಸಾಯಿ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಎರಡು ಹಂತಗಳಲ್ಲಿ ಕೌನ್ಸೆಲಿಂಗ್ ನಡೆಸಲಾಗಿದೆ. ಎರಡನೇ ಹಂತದ ಕೌನ್ಸೆಲಿಂಗ್ ನಂತರವೂ ಪರಿಶಿಷ್ಟ ಜಾತಿಯ ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ಸ್ಥಾನಗಳು ಖಾಲಿ ಉಳಿದಿದೆ.
ಮೂರನೇ ಸುತ್ತಿನ ಕೌನ್ಸೆಲಿಂಗ್ ತಾ. 29 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಗರದ ಡಿ. ದೇವರಾಜ ಅರಸ್ ಭವನದಲ್ಲಿ ನಡೆಯಲಿದೆ. ಪ್ರವೇಶ ಪರೀಕ್ಷೆಗೆ ಹಾಜರಾಗಿ ಅರ್ಹರಿರುವ ಪರಿಶಿಷ್ಟ ಜಾತಿಯ ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಮೂಲ ಜಾತಿ ದೃಢೀಕರಣ ಪತ್ರ, ಆದಾಯ ಪ್ರಮಾಣ ಪತ್ರ ಹಾಗೂ ಭಾವಚಿತ್ರದೊಂದಿಗೆ ಹಾಜರಾಗುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.