ಶನಿವಾರಸಂತೆ, ಜೂ. 30: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಶನಿವಾರಸಂತೆ ವ್ಯಾಪ್ತಿಯ 9 ಶಾಲೆಗಳ ಮಾಲೀಕರು ಹಾಗೂ ಶಿಕ್ಷಕರ ವಿಶೇಷ ಸಭೆಯನ್ನು ಕರೆಯಲಾಗಿತ್ತು. ಠಾಣಾಧಿಕಾರಿ ಹೆಚ್.ಎಂ. ಮರಿಸ್ವಾಮಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ತಮ್ಮ ತಮ್ಮ ವ್ಯಾಪ್ತಿಯ ಶಾಲೆಗೆ ಸಂಬಂಧಿಸಿದ ವಾಹನಗಳಲ್ಲಿ ಹೆಚ್ಚಿನ ಸೀಟುಗಳನ್ನು ಅಳವಡಿಸದೆ ವಾಹನಗಳಿಗೆ ವಿಮೆ ಇರುವ ಬಗ್ಗೆ ಖಚಿತಪಡಿಸಿಕೊಳ್ಳುವಂತೆ ತಿಳಿ ಹೇಳಿದರು.

ವಿದ್ಯಾರ್ಥಿಗಳಿಗೆ, ಶಾಲಾ ವಾಹನಗಳನ್ನು ಚಾಲನೆ ಮಾಡಲು ಕೊಡಬಾರದು. ಕಾನೂನು ಪಾಲಿಸಬೇಕು, ವಾಹನ ಚಾಲಕರಿಗೆ ಕನಿಷ್ಟ 5 ವರ್ಷ ವಾಹನ ಚಾಲನಾ ಅನುಭವವಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ಶಾಲೆಗಳಲ್ಲಿ ಪೋಷಕರ ಸಭೆಯನ್ನು ನಡೆಸುತ್ತಿರಬೇಕು ಎಂದು ಮನವರಿಕೆ ಮಾಡಿಕೊಟ್ಟರು.

ಸಭೆಯಲ್ಲಿ ಶಾಲಾ ಮಾಲೀಕರು, ಶಿಕ್ಷಕರುಗಳು, ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.