ಕೂಡಿಗೆ, ಜೂ. 30: ಕೂಡಿಗೆಯಲ್ಲಿರುವ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಯಲ್ಲಿ ಸದ್ಗುರು ಸಮಾಜ ಸಂಘದ ಉದ್ಘಾಟನೆಯನ್ನು ಶಾಲಾ ಆಡಳಿತ ಮಂಡಳಿಯ ವ್ಯವಸ್ಥಾಪಕ ಎಂ.ಬಿ. ಮೊಣ್ಣಪ್ಪ ನೆರವೇರಿಸಿದರು. ಶಾಲೆಗಳಲ್ಲಿ ಇಂತಹ ಸಂಘಗಳ ರಚನೆಯಿಂದ ವಿದ್ಯಾರ್ಥಿಗಳ ಪ್ರಗತಿಪರ ಚಿಂತನೆ ಹಾಗೂ ಶಾಲೆ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ ಎಂದರು. ಪೋಷಕ ಪರಿಷತ್ತಿನ ಸಭೆÀಯು ಶಾಲಾ ಆವರಣದಲ್ಲಿ ನಡೆಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷದ ಪ್ರಗತಿ ಬಗ್ಗೆ ಚರ್ಚಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಖಜಾಂಚಿ ಎಂ.ಬಿ. ಜಯಂತ್ ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ವೆಂಕಟೇಶ, ಶಾಲಾ ಮುಖ್ಯೋಪಾಧ್ಯಾಯಿನಿ ಸ್ವಾತಿ, ಪರಿಷತ್ತಿನ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.