ಸಿದ್ದಾಪುರ, ಜು. 2: ಪಾದಚಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಸಿದ್ದಾಪುರ ಸಮೀಪದ ನೆಲ್ಯಹುದಿಕೇರಿಯಲ್ಲಿ ನಡೆದಿದೆ. ಕೂಡುಗದ್ದೆಯ ನಿವಾಸಿ ಖಮರುದ್ದಿನ್ ಎಂಬಾತ ನೆಲ್ಯಹುದಿಕೇರಿಯಿಂದ ಸಿದ್ದಾಪುರಕ್ಕೆ ತನ್ನ ಬೈಕ್ ನಲ್ಲಿ ತೆರಳುತ್ತಿದ್ದು, ಮೀನು ಮಳಿಗೆಯ ಮುಂಭಾಗ ರಸ್ತೆಯಲ್ಲಿ ತೆರಳುತ್ತಿದ್ದ ಸುರೇಂದ್ರನ್ ಎಂಬವರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಪಾದಚಾರಿ ಸುರೇಂದ್ರನ್ ಕಾಲುಗಳಿಗೆ ಹಾಗೂ ಸವಾರ ಖಮರುದ್ದಿನ್ ತಲೆಗೆ ಗಂಭೀರ ಗಾಯವಾಗಿದೆ. ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಖಮರುದ್ದಿನ್ ಸಾವನ್ನಪ್ಪಿದ್ದಾನೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.