ವೀರಾಜಪೇಟೆ: ನಗರದ ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿ ಸಂಘವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ, ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕರು, ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷರು ಆದ ಬಿ.ಜಿ. ಅನಂತಶಯನ ಉದ್ಘಾಟನೆ ಮಾಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಿ.ಜಿ ಅನಂತಶಯನ ಅವರು, ವಿದ್ಯಾರ್ಥಿಗಳು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಹಾಗೂ ಹೆಸರಿಗಷ್ಟೇ ನಾಯಕರಾಗಬಾರದು. ಪ್ರತಿಯೊಂದನ್ನು ವ್ಯವಸ್ಥಿತವಾಗಿ ಯೋಚಿಸಿ, ಜಾರಿಗೆ ತರುವ ಪರಿಪೂರ್ಣ ವ್ಯಕ್ತಿತ್ವದ ನಾಯಕರುಗಳಾಗಬೇಕು ಎಂದು ನೀತಿ ಕಥೆಗಳ ಮೂಲಕ ವಿದ್ಯಾರ್ಥಿಗಳಿಗೆ ತಿಳುವಳಿಕೆ ನೀಡಿದರು.
ಪ್ರಜಾಸತ್ಯ ಪತ್ರಿಕೆಯ ವರದಿಗಾರ್ತಿ ಉಷಾ ಪ್ರೀತಮ್ ಮಾತನಾಡಿ, ಚಿಕ್ಕಂದಿನಲ್ಲಿಯೇ ವಿದ್ಯಾರ್ಥಿಗಳನ್ನು ತಂದೆ-ತಾಯಿ, ಶಿಕ್ಷಕರುಗಳು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಬೇಕು ಎಂದರು.
ಸಂತ ಅನ್ನಮ್ಮ ದೇವಾಲಯದ ರೆವರೆಂಡ್ ಫಾದರ್ ಮದಲೈಮುತ್ತು ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ಹೇಗೆ ಗುರುತಿಸಿಕೊಳ್ಳಬೇಕು ಎನ್ನುವ ಕುರಿತು ಮಾತನಾಡಿದರು.
ನಾಯಕಿ ತಸ್ಲೀನಾ ವಾರ್ಷಿಕ ವರದಿಯನ್ನು ವಾಚಿಸಿದರು. ಹತ್ತನೇ ತರಗತಿ ಮಕ್ಕಳಿಂದ ನೃತ್ಯ ಹಾಗೂ ಹಾಡುಗಾರಿಕೆಯನ್ನು ಏರ್ಪಡಿಸಲಾಗಿತ್ತು. ಸಂತ ಅನ್ನಮ್ಮ ಶಾಲೆಯ ಮುಖ್ಯೋಪಾಧ್ಯಾಯಿನಿ ಬೆನ್ನಿ, ಸಿಸ್ಟರ್ ಜಾನೇಟ್, ಚಿತ್ರಕಲಾ ಶಿಕ್ಷಕ ಕ್ಲಿಫರ್ಡ್ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಸೋಮವಾರಪೇಟೆ: ಪ್ರತೀ ಶಾಲೆಯಲ್ಲೂ ಸ್ಕೌಟ್ಸ್, ಗೈಡ್ಸ್, ಕಬ್ಸ್ ಹಾಗೂ ಬುಲ್‍ಬುಲ್ ದಳಗಳು ಕ್ರಿಯಾಶೀಲತೆಯಿಂದ ಕಾರ್ಯ ನಿರ್ವಹಿಸಿದಾಗ ಮಾತ್ರ ವಿದ್ಯಾರ್ಥಿಗಳಿಗೆ ಅದರ ಪ್ರಯೋಜನ ದೊರಕಲಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ತಾಲೂಕು ಅಧ್ಯಕ್ಷ ಬಿ.ಎ. ಭಾಸ್ಕರ್ ಹೇಳಿದರು.
ಇಲ್ಲಿನ ತಾಲೂಕು ಸಂಸ್ಥೆಯ ಸಭಾಂಗಣದಲ್ಲಿ ನಡೆದ ಸಂಸ್ಥೆಯ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ವಾರ್ಷಿಕ ಮಹಾಸಭೆಗೆ ಕೇವಲ 25-30 ಮಂದಿ ಶಿಕ್ಷಕರು ಮಾತ್ರ ಹಾಜರಾಗುತ್ತಿದ್ದಾರೆ. ತಾ. 8 ರಂದು ನಡೆಯಲಿರುವ ವಾರ್ಷಿಕ ಮಹಾಸಭೆಗೆ ಎಲ್ಲಾ ಶಾಲೆಯಿಂದಲೂ ನಿಯೋಜಿತ ಶಿಕ್ಷಕರುಗಳು ಕಡ್ಡಾಯವಾಗಿ ಹಾಜರಾಗಬೇಕು. ಗೈರಾಗುವವರ ಬಗ್ಗೆ ಶಿಸ್ತಿನ ಕ್ರಮಕ್ಕಾಗಿ ಮೇಲಧಿಕಾರಿಗಳಿಗೆ ವರದಿ ಸಲ್ಲಿಸುವದಾಗಿ ಎಚ್ಚರಿಸಿದರು.
ವಾರ್ಷಿಕ ಮಹಾಸಭೆಯ ಬಗ್ಗೆ ಚರ್ಚೆ ನಡೆಸಲಾಯಿತು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಟಿ.ಎಸ್. ಚಂದ್ರಶೇಖರ್, ಖಜಾಂಚಿ ಕೆ.ಟಿ. ಚಂದ್ರಕಲಾ, ಜಿಲ್ಲಾ ತರಬೇತಿ ಆಯುಕ್ತ ಎನ್.ಎಲ್ ಸುರೇಶ್‍ಕುಮಾರ್, ಸದಸ್ಯರುಗಳಾದ ಡಿ.ಎಸ್. ಆಶಾ, ಎಂ.ಎಸ್. ಗಣೇಶ್, ಮಾನೆ ರಾಜು, ಎನ್.ಎಂ. ನಾಗೇಶ್ ಉಪಸ್ಥಿತರಿದ್ದರು.
ಕೂಡಿಗೆ: ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಯ ಅಡಳಿತ ಮಂಡಳಿಯ ವತಿಯಿಂದ ಶಾಲಾ ಅವರಣದಲ್ಲಿ ವನಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.
ಉದ್ಘಾಟನೆಯನ್ನು ಶಾಲಾ ವ್ಯವಸ್ಥಾಪಕ ಎಂ.ಬಿ. ಮೊಣಪ್ಪ, ಶಾಲಾ ಆಡಳಿತ ಮಂಡಳಿಯ ಖಜಾಂಚಿ ಎಂ.ಬಿ. ಜಯಂತ್, ಶಾಲಾ ವಿದ್ಯಾರ್ಥಿ ಪರಿಷತ್ತು ಅಧ್ಯಕ್ಷ ವೆಂಕಟೇಶ್, ಶಾಲಾ ಮುಖ್ಯ ಶಿಕ್ಷಕಿ ಸ್ವಾತಿ ಸೇರಿದಂತೆ ಶಿಕ್ಷಕ ವೃಂದ ಹಾಜರಿದ್ದರು.
ಗೋಣಿಕೊಪ್ಪ ವರದಿ: ಜೆಸಿಐ ಪೊನ್ನಂಪೇಟೆ ಗೋಲ್ಡನ್ ವತಿಯಿಂದ ದೇವರಪುರ ಅಮೃತವಾಣಿ ವಿಶೇಷ ಮಕ್ಕಳ ಶಾಲೆಗೆ ಶಿಕ್ಷಣ ಪರಿಕರ ನೀಡಲಾಯಿತು. ಶಾಲೆಯ ಸುಮಾರು 30 ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಪೆನ್ ವಿತರಣೆ ಮಾಡಲಾಯಿತು. ಈ ಸಂದರ್ಭ ಜೆಸಿಐ ಪೊನ್ನಂಪೇಟೆ ಗೋಲ್ಡನ್ ಅಧ್ಯಕ್ಷೆ ಕೊಣಿಯಂಡ ಕಾವ್ಯ ಸಂಜು, ದಾನಿ ಮೋರ್ಕಂಡ ಮೀನಾ ಗಣಪತಿ, ಮೋರ್ಕಂಡ ನಿಖಿಲ್, ಶಾಲೆ ಉಸ್ತುವಾರಿ ಸುಧಾ ಉಪಸ್ಥಿತರಿದ್ದರು.ಮಡಿಕೇರಿ: ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗವನ್ನು ಹವ್ಯಾಸವಾಗಿ ರೂಢಿಸಿಕೊಳ್ಳಬೇಕು, ಯೋಗ ಮಾಡುವದರಿಂದ ಆರೋಗ್ಯ ವೃದ್ಧಿಯಾಗುತ್ತದೆ. ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದೆಂದು ಪ್ರಾಂಶುಪಾಲೆ ಡಾ. ಜೆನಿಫರ್ ಲೋಲಿಟ ತಿಳಿಸಿದರು.
ಯೋಗ ದಿನಾಚರಣೆಯಲ್ಲಿ ಶ್ರೀಜಾ ಯೋಗ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಕುಶಾಲನಗರ: ವಿದ್ಯಾರ್ಥಿಗಳು ಸದೃಢ ಮನಸಿನೊಂದಿಗೆ ಪರಿಪೂರ್ಣ ಬೆಳವಣಿಗೆ ಹೊಂದುವಂತಾಗಬೇಕೆಂದು ಕೂಡಿಗೆ ಸರಕಾರಿ ಪದವಿಪೂರ್ವ ಕಾಲೇಜು ಉಪನ್ಯಾಸಕ ಸತೀಶ್ ಕರೆ ನೀಡಿದರು.
ಕೊಪ್ಪ ಭಾರತಮಾತ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಸಾಹಿತ್ಯ, ಸಾಂಸ್ಕøತಿಕ ಮತ್ತು ಇತರ ಸಮಿತಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಓದಿನ ಜೊತೆಗೆ ಮಾನಸಿಕವಾಗಿ ಸದೃಢರಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜು ಪ್ರಾಂಶುಪಾಲ ರೆ.ಫಾ. ಜೋಸ್, ಯುವ ಪೀಳಿಗೆ ಹೊಸ ಆಲೋಚನೆ ಹಾಗೂ ಯೋಜನೆಗಳೊಂದಿಗೆ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.
ಈ ಸಂದರ್ಭ ಸಾಹಿತ್ಯ ಸಮಿತಿ, ಸಾಂಸ್ಕøತಿಕ ಸಮಿತಿ, ಮಾನವೀಯ ಸಮಿತಿ, ವಿಜ್ಞಾನ ಸಮಿತಿ, ವಾಣಿಜ್ಯ ಸಮಿತಿ ಹಾಗೂ ಕ್ರೀಡಾ ಸಮಿತಿಯ ವಿದ್ಯಾರ್ಥಿ ಸದಸ್ಯರು ತಮ್ಮ ತಮ್ಮ ಸಮಿತಿಗಳ ಪ್ರದರ್ಶನ ಮಾಡಿದರು. ನಂತರ ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.
ವಿದ್ಯಾರ್ಥಿನಿ ಶ್ರದ್ಧಾ ಸ್ವಾಗತಿಸಿ, ನಾಫಿಯ ಹಾಗೂ ಯಶಸ್ವಿನಿ ನಿರೂಪಿಸಿ, ಚಂದನ್ ವಂದಿಸಿದರು.
ಸಿದ್ದಾಪುರ: ಕರಡಿಗೋಡುವಿನ ಇವಾಲ್ವ್ ಬ್ಯಾಕ್ ಸಂಸ್ಥೆಯ ವತಿಯಿಂದ ಕರಡಿಗೋಡು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಹಾಗೂ ಪುಸ್ತಕ ವಿತಣೆ ನಡೆಯಿತು.
ಸಂಸ್ಥೆಯ ಪ್ರಧಾನ ವ್ಯವಸ್ಥಾಪಕಿ ಕಾಂತಿ ಅನೀಶ್ ಹಾಗೂ ವಿ.ಕೆ. ಲೋಕೇಶ್ ಮಾತನಾಡಿದರು. ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಶಿಕ್ಷಣ, ಪ್ರವಾಸ ಸೇರಿದಂತೆ ಆಟೋಟಗಳನ್ನು ನಡೆಸಿಕೊಂಡು ಬರುತ್ತಿದ್ದು, ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದರು.
ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಸೌಮ್ಯ, ಗ್ರಾ.ಪಂ. ಸದಸ್ಯರಾದ ಪೂವಮ್ಮ, ಶೀಲ, ಪ್ರಮುಖರಾದ ಕಂಬೀರಂಡ ದೇವಯ್ಯ ಹಾಗೂ ನಂದಾ ಗಣಪತಿ, ಮುಖ್ಯ ಶಿಕ್ಷಕಿ ಮೋಳಿ ಇನ್ನಿತರರು ಇದ್ದರು.
ಕೂಡಿಗೆ: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನತಾ ಕಾಲೋನಿಯ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮೋರ್ಚಾ ವತಿಯಿಂದ ಗಿಡ ನೆಡುವ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಕಾರ್ಯಕ್ರಮವನ್ನು ಶಕ್ತಿ ಕೇಂದ್ರದ ಅಧ್ಯಕ್ಷೆ ಸಾವಿತ್ರಿ ರಾಜು ನೆರವೇರಿಸಿದರು. ನಂತರ ಪರಿಸರದ ಬಗ್ಗೆ ಮಾತನಾಡಿದರು. ಈ ಸಂದರ್ಭ ಶಕ್ತಿ ಕೇಂದ್ರದ ಪ್ರಮುಖರಾದ. ಕನಕ, ರುದ್ರಾಂಬಿಕೆ, ವೇದಾವತಿ, ನಿರ್ಮಲ, ಪವಿತ್ರ, ನೂತನ್, ಸಾವಿತ್ರಿ, ಸವಿತ, ವಸಂತಿ, ಲಕ್ಷಿ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಗ್ರಾಮಸ್ಥರು ಹಾಜರಿದ್ದರು.ಮಡಿಕೇರಿ: ಕಡಗದಾಳು ಗ್ರಾಮದ ಗಂಗಾ ಹೀನಾ ಬಸೀನ್ ಇವರು ಸರಕಾರಿ ಪ್ರೌಢಶಾಲೆ ಕಡಗದಾಳು ಇಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿ ಉತ್ತೀರ್ಣರಾಗಿದ್ದು, ಮೂವರು ವಿದ್ಯಾರ್ಥಿಗಳಿಗೆ ನಗದು ಹಣ ನೀಡಿದರು.
ಸ್ಥಳೀಯ ದಾನಿಗಳು ಶಿಕ್ಷಣ ಪ್ರೇಮಿಗಳು ಆದ ಗಂಗಾ ಹೀನಾ ಬಸೀನ್ ಇವರು ಶಾಲಾ ಭೌತಿಕ ಮತ್ತು ಶೈಕ್ಷಣಿಕ ಅಗತ್ಯಗಳಿಗೆ ಸ್ಪಂದಿಸಿ ಶಾಲಾ ನಾಮಫಲಕ, ಕೈ ತೊಳೆಯುವ ಸಿಂಕ್, ಒಂದನೇ ತರಗತಿಯಿಂದ ಹತ್ತನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಏಕ ರೀತಿಯ ಸ್ವೇಟರ್ ಹೀಗೆ ಅನೇಕ ಕೊಡುಗೆಗಳನ್ನು ನೀಡಿರುತ್ತಾರೆ. ಅಲ್ಲದೆ ಇತರ ದಾನಿಗಳಿಂದ ಶಾಲೆಗೆ ವಿದ್ಯುತ್ ಸೌಲಭ್ಯ, ಯು.ಪಿ.ಎಸ್. ಶಾಲಾ ಬ್ಯಾಗ್, ಪೀಠೋಪಕರಣಗಳನ್ನು ಕೊಡಿಸಿದ್ದಾರೆ. ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹಿಸುವ ಇವರು 2018-19ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿ ಉತ್ತೀರ್ಣರಾದ ಮೊಹಮ್ಮದ್ ರಮೀಶ್, ಹೈದರಾಲಿ ಮತ್ತು ಸಹನಾ ಈ ವಿದ್ಯಾರ್ಥಿಗಳಿಗೆ ನಗದು ಹಣ ನೀಡಿ ಮುಂದಿನ ಶಿಕ್ಷಣಕ್ಕೆ ಸಹಕಾರ ನೀಡಿದ್ದಾರೆ.
ಗೋಣಿಕೊಪ್ಪ: ಇಲ್ಲಿಗೆ ಸಮೀಪದ ಅತ್ತೂರುವಿನ ನ್ಯಾಷನಲ್ ಅಕಾಡೆಮಿ ಶಾಲೆಯಲ್ಲಿ ರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಸಾಮೂಹಿಕವಾಗಿ ವಿದ್ಯಾರ್ಥಿಗಳು ಸೇರಿದಂತೆ ಶಿಕ್ಷಕ ವರ್ಗದವರು ಯೋಗ ಪ್ರದರ್ಶನದಲ್ಲಿ ನಿರತರಾಗಿದ್ದರು.
ರಿಷಾ ನಾಣಯ್ಯ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಕುರಿತಾಗಿ ಮಾತನಾಡಿದರು. ಯೋಗ ಶಿಕ್ಷಕಿ ಬಿದ್ದಂಡ ಪೂಜ ವಿದ್ಯಾರ್ಥಿಗಳಿಗೆ ಯೋಗಾಸನದ ವಿವಿಧ ಹಂತಗಳನ್ನು ಬೋಧಿಸಿದರು. ಈ ಸಂದರ್ಭ ಶಾಲಾ ಸಂಸ್ಥಾಪಕಿ ಶಾಂತಿ ಅಚ್ಚಪ್ಪ, ಟ್ರಸ್ಟಿ ರಕ್ಷಿತ್ ಅಯ್ಯಪ್ಪ, ಪ್ರಾಂಶುಪಾಲ ಅರುಣ್‍ಕುಮಾರ್ ಸೇರಿದಂತೆ ಎಲ್ಲಾ ಶಿಕ್ಷಕ ವರ್ಗದವರು ಭಾಗಿಯಾಗಿದ್ದರು.
ಸೋಮವಾರಪೇಟೆ: ತಾಲೂಕಿನ ಗ್ರಾಮೀಣ ಪ್ರದೇಶಗಳ ಸರ್ಕಾರಿ ಶಾಲೆಗಳಿಗೆ ಉದ್ಯಮಿ ಹರಪಳ್ಳಿ ರವೀಂದ್ರ ಅವರು ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸಿದರು.
ಕಿರಗಂದೂರು ಸರ್ಕಾರಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಯಾವೊಬ್ಬ ವಿದ್ಯಾರ್ಥಿಯೂ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ತಮ್ಮ ಆದಾಯದ ಒಂದು ಪಾಲಿನಲ್ಲಿ ಪುಸ್ತಕಗಳನ್ನು ವಿತರಿಸುತ್ತಿರುವದಾಗಿ ತಿಳಿಸಿದರು.
ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಭರತ್ ಮಾತನಾಡಿ, ಕಿರಗಂದೂರಿನಲ್ಲಿ ಆಂಗ್ಲ ಮಾಧ್ಯಮ, ಪೂರ್ವ ಪ್ರಾಥಮಿಕ ಶಾಲೆಯನ್ನು ಸ್ಥಾಪಿಸಲಾಗಿದ್ದು, ಇದಕ್ಕೆ ಹೆಚ್ಚಿನ ಸೌಕರ್ಯಗಳನ್ನು ಒದಗಿಸಿಕೊಡಲು ಸಹಕಾರ ನೀಡುವಂತೆ ಮನವಿ ಮಾಡಿದರು.
ವೇದಿಕೆಯಲ್ಲಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಧರ್ಮಪ್ಪ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಮಂಜುನಾಥ್, ಎಸ್‍ಡಿಎಂಸಿ ಅಧ್ಯಕ್ಷರುಗಳಾದ ಪ್ರಸನ್ನ, ಶೈಲಾ ಪ್ರವೀಣ್, ಪ್ರಮುಖ ಎಂ.ಪಿ. ಗೋಪಾಲ್, ಪಂಚಾಯಿತಿ ಸದಸ್ಯ ಪೊನ್ನಪ್ಪ ಇತರರು ಉಪಸ್ಥಿತರಿದ್ದರು. ಶಾಲಾ ಶಿಕ್ಷಕರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರುಗಳು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಭಾಗವಹಿಸಿದ್ದರು.
ಇದೇ ಸಂದರ್ಭ ರವೀಂದ್ರ ಅವರನ್ನು ಶಾಲಾಭಿವೃದ್ಧಿ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.
ಗೋಣಿಕೊಪ್ಪ: ಇಲ್ಲಿಗೆ ಸಮೀಪದ ಅತ್ತೂರುವಿನ ನ್ಯಾಷನಲ್‍ಅಕಾಡೆಮಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳು ಸೇರಿದಂತೆ ಶಿಕ್ಷಕ ವರ್ಗದವರು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಸೇರಿದಂತೆ ಸರ್ವರೂ ಪರಿಸರದ ಉಳಿವಿಗಾಗಿ ಪಣತೊಟ್ಟು ದಿನಾಚರಣೆಯ ಮಹತ್ವವನ್ನರಿತರು. ಅನೇಕ ಗಿಡಗಳನ್ನು ಶಾಲಾ ಆವರಣದಲ್ಲಿ ನೆಟ್ಟು ನಮ್ಮ ಪರಿಸರ ಉಳಿಸಲು ಶ್ರಮ ವಹಿಸಿದರು.
ಈ ಸಂದರ್ಭ ಶಾಲಾ ಸಂಸ್ಥಾಪಕಿ ಶಾಂತಿ ಅಚ್ಚಪ್ಪ, ಟ್ರಸ್ಟಿ ರಕ್ಷಿತ್ ಅಯ್ಯಪ್ಪ, ಪ್ರಾಂಶುಪಾಲ ಅರುಣ್‍ಕುಮಾರ್ ಸೇರಿದಂತೆ ಎಲ್ಲಾ ಶಿಕ್ಷಕ ವರ್ಗದವರು ಭಾಗಿಯಾಗಿದ್ದರು.ನಾಪೆÇೀಕ್ಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಗಾಳಿಬೀಡು, ಹೊದ್ದೂರು, ಕೆದಮಳ್ಳೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಈ ಸಂದರ್ಭ ಸಂಘದ ಮಡಿಕೇರಿಯ ಮೇಲ್ವಿಚಾರಕ ಹರೀಶ್, ಮೂರ್ನಾಡು ಮೇಲ್ವಿಚಾರಕಿ ಜಯಶ್ರೀ, ವೀರಾಜಪೇಟೆ ಮೇಲ್ವಿಚಾರಕಿ ರತ್ನ ಮೈಪಾಲ ಹಾಗೂ ಮಡಿಕೇರಿ ತಾಲೂಕು ಕೃಷಿ ಅಧಿಕಾರಿ ಚೇತನ್, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಇದ್ದರು.
ಒಡೆಯನಪುರ: ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕೊಡ್ಲಿಪೇಟೆ ವಲಯ ಮತ್ತು ಕೊಡ್ಲಿಪೇಟೆ ಸಂಯುಕ್ತ ಪ.ಪೂ. ಕಾಲೇಜಿನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆ ಜಿಲ್ಲಾ ಸದಸ್ಯ ಭಗವಾನ್, ವಿದ್ಯಾಸಂಸ್ಥೆ ಕಾರ್ಯದರ್ಶಿ ಕೆ.ಎಸ್. ಪರಮೇಶ್, ವಿದ್ಯಾಸಂಸ್ಥೆ ನಿರ್ದೇಶಕ ಬಿ.ಕೆ. ಯತೀಶ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಎಂ.ಆರ್. ನಿರಂಜನ್, ವಿದ್ಯಾಸಂಸ್ಥೆ ಪ್ರೌಢಶಾಲಾ ಮುಖ್ಯ ಶಿಕ್ಷಕ ಅಬ್ದುಲ್, ಕೊಡ್ಲಿಪೇಟೆ ವಲಯ ಮೇಲ್ವಿಚಾರಕ ಕೆ. ರಮೇಶ್, ಸೇವಾ ಪ್ರತಿನಿಧಿ ಶಂಶಾದ್, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಗಿಡ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸುಂಟಿಕೊಪ್ಪ: ಬೋಯಿಕೇರಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಅಲ್‍ಕಿನ್ಸ್, ಪ್ರಗತಿ ಫೌಂಡೆಷನ್, ಯನೈಟೆಡ್ ವೇ, ಕ್ಯಾರಿಥಾಸ್ ಸಂಸ್ಥೆಗಳ ವತಿಯಿಂದ ಉಚಿತ ಬ್ಯಾಗ್ ಮತ್ತು ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು. ಅಲ್ ಕಿನ್ಸ್ ಸಂಸ್ಥೆಯ ಮುಖ್ಯಸ್ಥ ರಾಬರ್ಟ್ ಡಿಸೋಜಾ, ಪ್ರಗತಿ ಫೌಂಡೆಷನ್ ನಿರ್ದೇಶಕರಾದ ಶರಣಪ್ಪ, ಮಹೇಶ್, ಶಾಲಾ ಮುಖ್ಯ ಶಿಕ್ಷಕ ಹೆಚ್.ಅರ್. ರಾಜು, ಎಸ್.ಡಿ.ಎಂ.ಸಿ. ಅಧ್ಯಕ್ಷ ಹೆಚ್.ಎ. ಆನಂದ, ಜಿಲ್ಲಾ ಸಮನ್ವಯ ಶಿಕ್ಷಣ ಸಂಯೋಜಕÀ ಹೆಚ್.ಎಂ. ವೆಂಕಟೇಶ, ಶಿಕ್ಷಕಿಯರಾದ ಸುಲೋಚನಾ, ಶಾಲಿನಿ, ಐರಿನ್ ಉಷಾ, ಚೈತ್ರ, ಪಿ.ಎ. ಪಾರ್ವತಿ ಮತ್ತು ಸಿಬ್ಬಂದಿ ಇದ್ದರು.
ಕಳಲೆ ಶಾಲೆಯಲ್ಲಿ: ಸೋಮವಾರಪೇಟೆ-ಸಕಲೇಶಪುರ ಗಡಿಗ್ರಾಮ ಕಳಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ರವೀಂದ್ರ ಉಚಿತವಾಗಿ ಪುಸ್ತಕಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಲಕ್ಷ್ಮಣ್, ಪ್ರಮುಖರಾದ ಧರ್ಮಪ್ಪ ಅವರುಗಳು ಉಪಸ್ಥಿತರಿದ್ದರು.ಗೋಣಿಕೊಪ್ಪ ವರದಿ: ಬೆಂಗಳೂರು ಮಲೇಶ್ವರಂ ಕೆನರಾ ಯೂನಿಯನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ರಾಮಯ್ಯ ರಾಜನ್ ಮೆಮೋರಿಯಲ್ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬೊಪ್ಪಂಡ ದಿಯಾ ಭೀಮಯ್ಯ-ಅಮೂಲ್ಯ ಅಭಿಲಾಶ್ ಕಶ್ಯಪ್ ಜೋಡಿಗೆ 13 ವಯೋಮಿತಿಯ ವಿಭಾಗದಲ್ಲಿ ರನ್ನರ್ ಅಪ್ ಸ್ಥಾನ ಲಭಿಸಿದೆ.
13 ವಯೋಮಿತಿಯ ವಿಭಾಗದಲ್ಲಿ ಸ್ಪರ್ಧಿಸಿ ಸಾಧನೆ ಮಾಡಿದರು. ದಿಯಾ ಗೋಣಿಕೊಪ್ಪ ಕೂರ್ಗ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿ. ಅಮೂಲ್ಯ ಬೆಂಗಳೂರು ಜೆಎಸ್‍ಎಸ್ ಶಾಲೆ ವಿದ್ಯಾರ್ಥಿನಿಯಾಗಿದ್ದಾಳೆ.ನಾಪೆÉÇೀಕ್ಲು: ಸಮೀಪದ ಕಬಡಕೇರಿ ಅಂಗನವಾಡಿ ಕೆಂದ್ರದಲ್ಲಿ ಕಳೆದ 30 ವರ್ಷಗಳಿಂದ ಸೇವೆ ಸಲ್ಲಿಸಿ ಈಗ ನಿವೃತ್ತಿ ಹೊಂದಿರುವ ಅಂಗನವಾಡಿ ಕಾರ್ಯಕರ್ತೆ ಕೂಡಂಡ ಜಾನಕಿ ಅವರನ್ನು ನಾಪೆÉÇೀಕ್ಲು ವೃತ್ತ ಅಂಗನವಾಡಿ ಕೇಂದ್ರದ ವತಿಯಿಂದ ಸನ್ಮಾನಿಸಿ, ಬೀಳ್ಕೊಡಲಾಯಿತು.
ಮುಖ್ಯ ಅತಿಥಿಯಾಗಿ ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಮೇಪಾಡಂಡ ಸವಿತಾ ಪಾಲ್ಗೊಂಡಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಂಗಾಂಡ ಕಾವೇರಮ್ಮ ವಹಿಸಿದ್ದರು. ವೇದಿಕೆಯಲ್ಲಿ ಆಶಾಲತ, ಬೊಳ್ಳೇಪಂಡ ಆಶಾ, ಮೀನಾಕ್ಷಿ, ಅನುಸೂಯ, ಶಾರದ, ಪೆÇನ್ನಮ್ಮ, ಶೋಭಾ, ಮತ್ತಿತರರು ಇದ್ದರು.