ಮಡಿಕೇರಿ, ಜು. 1: ಪೊನ್ನಂಪೇಟೆ ತಾಲೂಕು ರಚನೆಯ ಬಗ್ಗೆ ತಾ. 3ರಂದು ಪೊನ್ನಂಪೇಟೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಬೇಕಿದ್ದ ಸಭೆಯನ್ನು ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅವರ ಕೋರಿಕೆಯಂತೆ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.