ಕುಶಾಲನಗರ, ಜು. 2: ಸಾಲುಮರದ ತಿಮ್ಮಕ್ಕ ಇಂಟರ್ ನ್ಯಾಷನಲ್ ಫೌಂಡೇಷನ್ ಸಂಯುಕ್ತ ಆಶ್ರಯದಲ್ಲಿ ವೃಕ್ಷಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸೃತರಾದ ಡಾ. ಸಾಲುಮರದ ತಿಮ್ಮಕ್ಕ ಅವರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಅವಾರ್ಡ್ ಪ್ರದಾನ ಸಮಾರಂಭದಲ್ಲಿ ಜಿಲ್ಲೆಯ ಇಬ್ಬರು ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಬೆಂಗಳೂರಿನ ವಸಂತನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಮಾತನಾಡಿದರು. ಈ ಸಂದರ್ಭ ಎಂ.ಎನ್. ಚಂದ್ರಮೋಹನ್, ಡಿ.ಕೆ. ರಂಜಿತಾ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸಾಲುಮರದ ತಿಮ್ಮಕ್ಕ ಇಂಟರ್ ನ್ಯಾಷನಲ್ ಫೌಂಡೇಷನ್ ಅಧ್ಯಕ್ಷ ಡಾ. ಉಮೇಶ್, ಚಿತ್ರದುರ್ಗದ ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರು, ಹಳೆಬೀಡು ಪುಷ್ಪಗಿರಿ ಕ್ಷೇತ್ರದ ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ, ಬೇಲೂರು ಶಾಸಕ ಲಿಂಗೇಶ್, ಡಾ. ಕನ್ನಿಕಾ ಪರಮೇಶ್ವರ್, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ಮತ್ತಿತರರು ಇದ್ದರು.

ಸಾಲುಮರದ ತಿಮ್ಮಕ್ಕ ಅವರ ಭಾವಚಿತ್ರ ಒಳಗೊಂಡಿರುವ ಅಂಚೆ ಲಕೋಟೆಯನ್ನು ಭಾರತೀಯ ಅಂಚೆ ಇಲಾಖೆ ಕರ್ನಾಟಕ ಪ್ರಾದೇಶಿಕ ಪೋಸ್ಟ್ ಮಾಸ್ಟರ್ ಚಾಲ್ರ್ಸ್ ಲೋಬೋ ಬಿಡುಗಡೆಗೊಳಿಸಿದರು.