ಸೋಮವಾರಪೇಟೆ, ಜು. 2: ಮನೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿರುವ ಸೋಮವಾರಪೇಟೆ ಪೊಲೀಸರು ಆರೋಪಿಯನ್ನು ಬಂಧಿಸಿರುವ ಘಟನೆ ಸಮೀಪದ ಕೆಂಚಮ್ಮನಬಾಣೆ ಗ್ರಾಮದಲ್ಲಿ ನಡೆದಿದೆ.ಕೆಂಚಮ್ಮನಬಾಣೆ ನಿವಾಸಿ ದಿನೇಶ್ ಎಂಬವರು ತಮ್ಮ ವಾಸದ ಮನೆಯಲ್ಲಿ ಅಕ್ರಮವಾಗಿ ಮಾರಾಟ ಮಾಡಲು ಇಟ್ಟಿದ್ದ 3 ಲೀಟರ್ 870 ಮಿ.ಲೀ. ಮದ್ಯದೊಂದಿಗೆ ಆರೋಪಿಯನ್ನು ವಶಕ್ಕೆ ಪಡೆದು, ನ್ಯಾಯಾಧೀಶರ ಎದುರು ಹಾಜರುಪಡಿಸಿದ ಮೇರೆ ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಶಿವಶಂಕರ್, ಪ್ರೊಬೇಷನರಿ ಎಸ್.ಐ. ಮೋಹನ್‍ರಾಜ್, ಸಿಬ್ಬಂದಿಗಳಾದ ನವೀನ್, ಶಿವಕುಮಾರ್, ಪ್ರವೀಣ್, ಕಾಂತಿ ಅವರುಗಳು ಪಾಲ್ಗೊಂಡಿದ್ದರು.