ವೀರಾಜಪೇಟೆ, ಜು. 2: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶವನ್ನು ಹೊಗೆ ಮುಕ್ತವಾಗಿಸುವ ಮಹತ್ವದ ಯೋಜನೆಯಡಿ 47 ಮಂದಿ ಫಲಾನುಭವಿಗಳಿಗೆ ಉಚಿತ ಅಡುಗೆ ಅನಿಲ ವಿತರಿಸಲಾಯಿತು.
ಪ್ರಧಾನ ಮಂತ್ರಿ ಉಜ್ವಲ್ ಯೋಜನೆ ವತಿಯಿಂದ ವೀರಾಜಪೇಟೆ ಶಾಸಕರ ಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ತಾಲೂಕಿನ ಫಲಾನುಭವಿಗಳಿಗೆ ಗ್ಯಾಸ್ ವಿತರಣೆ ಮಾಡಿದ ಶಾಸಕ ಕೆ.ಜಿ. ಬೋಪಯ್ಯ ಅವರು, ಸರಕಾರ ಬಡ ಕುಟುಂಬಗಳಿಗೆ ನೀಡುತ್ತಿರುವ ಉಜ್ವಲ್ ಯೋಜನೆಯಿಂದ ಜಿಲ್ಲೆಯದ್ಯಾಂತ 18 ಸಾವಿರ ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್ ಮತ್ತು ಸ್ಟೌವ್ಗಳನ್ನು ವಿತರಿಸಲಾಗಿದೆ. 47 ಮಂದಿಗೆ ಗ್ಯಾಸ್ ವಿತರಣೆ ಮಾಡಲಾಗಿದೆ ಇದನ್ನು ಫಲಾನುಭವಿಗಳು ಸದುಪಯೋಗ ಪಡಿಸಿಕೊಳ್ಳುವಂತಾಗಬೇಕು ಎಂದರು
ಗ್ಯಾಸ್ ವಿತರಣಾ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಶಶಿ ಸುಬ್ರಮಣಿ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಬೊಳ್ಳಚಂಡ ಸ್ಮಿತಾ ಪ್ರಕಾಶ್, ಬಿಜೆಪಿಯ ಗಿರೀಶ್ ಗಣಪತಿ ಮತ್ತಿತರರು ಹಾಜರಿದ್ದರು.