ಮಡಿಕೇರಿ, ಜು. 1: ಮೈಸೂರಿನ ಭಾರತ ಕ್ಯಾನ್ಸರ್ ಆಸ್ಪತ್ರೆಯ ವೈದ್ಯರಾದ ಡಾ. ವಿಜಯ ಕುಮಾರ್ ನೇತೃತ್ವದಲ್ಲಿ ತಾ. 3 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ತನಕ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರವು ಮಡಿಕೇರಿ ಅಶ್ವಿನಿ ಆಸ್ಪತ್ರೆಯಲ್ಲಿ ನಡೆಯಲಿದೆ. ರೋಗಿಗಳು ಈ ಸೌಲಭ್ಯ ಪಡೆದುಕೊಳ್ಳುವಂತೆ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.