ಕುಶಾಲನಗರ, ಜು. 2: ಕುಶಾಲನಗರ ಸಮೀಪ ಕೊಪ್ಪ ಗಿರಗೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಪೌಷ್ಟಿಕ ಆಹಾರ ಮೇಳ ಕಾರ್ಯಕ್ರಮ ನಡೆಯಿತು.

ಕೊಪ್ಪ ವಲಯದ ಮಹಿಳಾ ಜ್ಞಾನವಿಕಾಸ ಯೋಜನೆಯಡಿ ನಡೆದ ಕಾರ್ಯಕ್ರಮವನ್ನು ಕೊಪ್ಪ ಗ್ರಾ.ಪಂ. ಉಪಾಧ್ಯಕ್ಷ ಯಶವಂತ ಕುಮಾರ್ ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದ ಆರೋಗ್ಯ ಇಲಾಖೆ ಅಧಿಕಾರಿ ಮುಜೀಬ್ ಪೌಷ್ಟಿಕ ಆಹಾರ ಮತ್ತು ಶುಚಿತ್ವದ ಮಹತ್ವದ ಕುರಿತು ಜಾಗೃತಿ ಮೂಡಿಸಿದರು.

ಯೋಜನೆಯ ಪಿರಿಯಾಪಟ್ಟಣ ತಾಲೂಕು ಯೋಜನಾಧಿಕಾರಿ ಸುರೇಶ್ ಶೆಟ್ಟಿ ಮಾತನಾಡಿದರು. ಕಾರ್ಯಕ್ರಮ ಉದ್ಘಾಟಿಸಿದ ಕೊಪ್ಪ ಗ್ರಾ.ಪಂ. ಉಪಾಧ್ಯಕ್ಷ ಯಶವಂತಕುಮಾರ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸದಸ್ಯ ಎಂ.ಎನ್. ಚಂದ್ರಮೋಹನ್ ಮಾತನಾಡಿದರು. ಶಕ್ತಿ ಸಂಘದ ಅಧ್ಯಕ್ಷೆ ಸುಲೋಚನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಯೋಜನೆಯ ಸಮನ್ವಯ ಅಧಿಕಾರಿ ಶಾರದಾ ಕಾರ್ಯಕ್ರಮ ಉದ್ದೇಶದ ಕುರಿತು ಮಾತನಾಡಿದರು.

ವಿವಿಧ ಸಂಘಗಳ ಪದಾಧಿಕಾರಿಗಳಾದ ಗೀತಾ, ರೇಷ್ಮಾ, ಜ್ಯೋತಿ, ಶಶಿಕಲಾ, ಸೇವಾ ಪ್ರತಿನಿಧಿ ಲೀಲಾ ಇದ್ದರು.

ಕಾರ್ಯಕ್ರಮದಲ್ಲಿ ಮಹಿಳೆಯರು ತಮ್ಮ ಮನೆಗಳಿಂದ ತಯಾರಿಸಿ ತಂದಿದ್ದ ವಿವಿಧ ರೀತಿಯ ಆಹಾರ ಖಾದ್ಯಗಳನ್ನು ಪ್ರದರ್ಶಿಸಿದರು.