ಭಾಗಮಂಡಲ, ಜು. 2: ಕರ್ನಾಟಕ ಸರ್ಕಾರದ ತೋಟಗಾರಿಕಾ ಇಲಾಖೆಯು ಕಳೆದ ಮೂರು ವರ್ಷಗಳಿಂದ ಇದುವರೆಗೆ ರಾಜ್ಯಾದ್ಯಂತ 99 ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿಯನ್ನು ಪ್ರಾರಂಭಿಸಿದ್ದು ಮೌಲ್ಯವರ್ಧನೆಗಾಗಿ ಭಾಗಮಂಡಲದ ಶ್ರೀಭಗಂಡೇಶ್ವರ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನಿಯಮಿತ ಕಂಪೆನಿಯು ‘ಬೆಸ್ಟ್ ಪರ್ಫಾರ್ಮಿಂಗ್ ಎಫ್ಪಿಓ ಇನ್ ಕರ್ನಾಟಕ’ ಎಂಬ ಪ್ರಶಸ್ತಿಗೆ ಭಾಜನವಾಗಿದೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರದ ತೋಟಗಾರಿಕಾ ಇಲಾಖೆ ಮತ್ತು ಪೋರ್ಟಲ್ ಸಂಸ್ಥೆ ಜಂಟಿಯಾಗಿ ಆಯೋಜಿಸಿದ್ದ ಕರ್ನಾಟಕ ರೈತ ಉತ್ಪಾದಕರ ಸಂಸ್ಥೆಗಳ ಗ್ರಾಹಕ - ಮಾರಾಟಗಾರರ ಕಾರ್ಯಾಗಾರದಲ್ಲಿ ಕರ್ನಾಟಕ ಸರ್ಕಾರದ ತೋಟಗಾರಿಕಾ ಮಂತ್ರಿ ಎಂ.ಸಿ. ಮನಗೂಳಿ ಪ್ರಶಸ್ತಿ ಪ್ರದಾನ ಮಾಡಿದರು. ಸಂಘದ ಕಾರ್ಯನಿರ್ವಹಣಾಧಿಕಾರಿ ಡಿ.ಎಸ್. ಬಿನ್ನಿ ಸಂಘದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.