ಮಡಿಕೇರಿ, ಜು. 2: ಜಿಲ್ಲಾ ಪಂಚಾಯಿತಿ, ವೀರಾಜಪೇಟೆ ತಾಲೂಕು ಪಂಚಾಯಿತಿ, ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಹಾಗೂ ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ವತಿಯಿಂದ ಸ್ವಚ್ಛ ಮೇವ ಜಯತೆ ಜನಾಂದೋಲನ ಕಾರ್ಯಕ್ರಮದ ಕೊಡಗು ಪರಿವರ್ತನ ಮೇಳ ತಾ. 6 ರಂದು ಬೆಳಿಗ್ಗೆ 10 ಗಂಟೆಗೆ ಪೊನ್ನಂಪೇಟೆ ಸರ್ಕಾರಿ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.