ಕೂಡಿಗೆ, ಜು. 3: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಮೋಹನ್ ಇಲ್ಲಿನ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಜ್ವರ ಪ್ರಕರಣಗಳ ಬಗ್ಗೆ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಿಳಿಸಿದರು. ಈ ಸಂದರ್ಭ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರವಿಚಂದ್ರ, ಸೇರಿದಂತೆ ಸಿಬ್ಬಂದಿ ಹಾಜರಿದ್ದರು.

ಜಾಗೃತಿ: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗಗಳ ಬಗ್ಗೆ ಅರಿವು ಕಾರ್ಯಕ್ರಮ ನಡೆಯಿತು. ಆರೋಗ್ಯ ಅಧಿಕಾರಿ ರವಿಚಂದ್ರ ಮತ್ತು ಗ್ರಾಮ ಪಂಚಾಯಿತಿ ಸದಸ್ಯ ರಾಮಚಂದ್ರ ಚಾಲನೆ ನೀಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕೂಡಿಗೆ, ಮಲ್ಲೇನಹಳ್ಲಿ, ಕೂಪ್ಪಲು ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತೆ ಬಗ್ಗೆ ಆಸ್ಪತ್ರೆ ಸಿಬ್ಬಂದಿ ವರ್ಗ ಮನೆ, ಮನೆಗಳಿಗೆ ತೆರಳಿ ಮಾಹಿತಿ ತಿಳಿಸಿದರು. ಮನೆಗಳಲ್ಲಿ ಶುಚಿತ್ವ, ನೀರು ಸಂಗ್ರಹ ಬಗ್ಗೆ ತಿಳಿಸಿದರು. ಆರೋಗ್ಯ ನಿರೀಕ್ಷಕ ಚಂದ್ರಶ್ ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು.