ಕುಶಾಲನಗರ, ಜು. 3: ಕುಶಲ ಅರ್ಚಕರ ಸಂಘದ ಆಶ್ರಯದಲ್ಲಿ ಕುಶಾಲನಗರ ಸೋಮೇಶ್ವರ ದೇವಾಲಯದಲ್ಲಿ ಮಳೆಗಾಗಿ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತಾ. 4ಂದು (ಇಂದು) ಬೆಳಿಗ್ಗೆ 8 ಗಂಟೆಯಿಂದ ಸೋಮೇಶ್ವರ ದೇವಾಲಯದಲ್ಲಿ ಶತರುದ್ರ ಪಾರಾಯಣ, ರುದ್ರಹೋಮ, 12 ಗಂಟೆಗೆ ಪೂರ್ಣಾಹುತಿ ನಂತರ ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.