ಮಡಿಕೇರಿ, ಜು. 3: ಶನಿವಾರಸಂತೆ ವಿದ್ಯುತ್ ಉಪ-ಕೇಂದ್ರದಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯ ನಿರ್ವಹಿಸಬೇಕಿರುವ ಹಿನ್ನೆಲೆ ಕ.ವಿ.ಪ್ರ.ನಿ.ನಿ. ಇವರ ಕೋರಿಕೆಯಂತೆ ತಾ. 4 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಶನಿವಾರಸಂತೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು. ಶನಿವಾರಸಂತೆ, ಹಂಡ್ಲಿ, ಬಲ್ಲಾರಳ್ಳಿ, ಕಿತ್ತೂರು, ಕೊಡ್ಲಿಪೇಟೆ, ಬ್ಯಾಡಗೊಟ್ಟ, ಬೆಸೂರು, ಬೀಟಿಕಟ್ಟೆ, ಅಂಕನಹಳ್ಳಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಸೋಮಶೇಖರ ಕೋರಿದ್ದಾರೆ.