ಮಡಿಕೇರಿ, ಜು. 3 : ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಯಿಂದ 10ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಚೇರಂಬಾಣೆ ಗ್ರಾಮದಲ್ಲಿ ಜುಲೈ ತಿಂಗಳ ಅಂತ್ಯದಲ್ಲಿ ನಡೆಸಲು ಉದ್ದೇಶಿಸಿದ್ದು, ಈ ಸಮ್ಮೇಳನದ ಪೂರ್ವಬಾವಿ ಸಭೆಯನ್ನು ತಾ. 6 ರಂದು ಬೆಳಿಗ್ಗೆ 11 ಗಂಟೆಗೆ ಚೇರಂಬಾಣೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಸಭೆಗೆ ಜನಪ್ರತಿನಿಧಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಮುಖಂಡರು, ಸೇರಿದಂತೆ ಮಡಿಕೇರಿ ತಾಲೂಕಿನ ಕಸಾಪ ಸದಸ್ಯರು, ಅಧಿಕಾರಿಗಳು ಪಾಲ್ಗೊಂಡು ಸಲಹೆ ಸೂಚನೆ ನೀಡುವಂತೆ ಸಾಹಿತ್ಯ ಪರಿಷತ್ತು ಪ್ರಕಟಣೆ ಕೋರಿದೆ.