ಸೋಮವಾರಪೇಟೆ, ಜು.3 : ತಾಲೂಕು ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆ ಶಾಸಕ ಅಪ್ಪಚ್ಚು ರಂಜನ್ ಅಧ್ಯಕ್ಷತೆಯಲ್ಲಿ ತಾ. 9ರಂದು ಬೆಳಿಗ್ಗೆ 10.30ಕ್ಕೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.
ತಾಲೂಕು ಮಟ್ಟದ ಎಲ್ಲಾ ಇಲಾಖಾಧಿಕಾರಿಗಳು ತಮ್ಮ ಇಲಾಖೆಯ ಪ್ರಗತಿ ವರದಿಯನ್ನು ಹಾಗೂ ನ. 14ರಂದು ನಡೆದ ಸಭಾ ನಡಾವಳಿಯ ಅನುಪಾಲನಾ ವರದಿಯನ್ನು ಜು.5ರೊಳಗೆ ತಾಲೂಕು ಪಂಚಾಯಿತಿಗೆ ಸಲ್ಲಿಸುವಂತೆ ಕಾರ್ಯನಿರ್ವ ಹಣಾಧಿಕಾರಿ ಸುನೀಲ್‍ಕುಮಾರ್ ತಿಳಿಸಿದ್ದಾರೆ.