ಮಡಿಕೇರಿ, ಜು. 3: ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಯಾಗಿದ್ದ ಮುಮ್ತಾಜ್ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕೇಂದ್ರ ಕಚೇರಿ ಬೆಂಗಳೂರುವಿಗೆ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟದಿಂದ ಮುಮ್ತಾಜ್ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಈ ಸಂದರ್ಭ ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ರೆಹನಾ ಸುಲ್ತಾನ್, ಪ್ರಧಾನ ಕಾರ್ಯದರ್ಶಿ ರಜಿನಿ, ಖಜಾಂಚಿ ತಾರಾಮಣಿ ಹಾಗೂ ನಿರ್ದೇಶಕರುಗಳಿದ್ದರು.