ಸೋಮವಾರಪೇಟೆ, ಜು. 3: ವಿವಾಹಿತೆ ಮಹಿಳೆಯೋರ್ವರು ಮನೆಯಿಂದ ನಾಪತ್ತೆಯಾಗಿರುವ ಘಟನೆ ಸಮೀಪದ ಕುಸುಬೂರು ಗ್ರಾಮದಲ್ಲಿ ನಡೆದಿದ್ದು, ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕುಸುಬೂರು ಗ್ರಾಮದ ರೋಹಿತ್ ಎಂಬವರ ಪತ್ನಿ ರೇಷ್ಮ (33 ವರ್ಷ) ಎಂಬವರು ಕಳೆದ ತಾ. 24.06.2019ರಂದು ಮನೆಯಿಂದ ನಾಪತ್ತೆಯಾಗಿದ್ದು, ಇವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಸೋಮವಾರಪೇಟೆ ಪೊಲೀಸ್ ಠಾಣೆ (08276-282040)ಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿ ಶಿವಶಂಕರ್ ಮನವಿ ಮಾಡಿದ್ದಾರೆ.