ಸಿದ್ದಾಪುರ, ಜು. 4: ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಕಾರ್ಯಾಚರಣೆ ನಡೆಸಿ, ವಶಪಡಿಸಿಕೊಂಡ ಘಟನೆ ಪಾಲಿಬೆಟ್ಟ ರಸ್ತೆಯಲ್ಲಿ ನಡೆದಿದೆ.

ಮಳೆಗಾಲದಲ್ಲಿ ಮರಗಳ ನಾಟಾಗಳನ್ನು ಸಾಗಿಸದಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದರೂ ಆದೇಶವನ್ನು ಗಾಳಿಗೆ ತೂರಿ ಅಕ್ರಮವಾಗಿ ಮರದ ನಾಟಾವನ್ನು ಸಿದ್ದಾಪುರ ಮಾರ್ಗವಾಗಿ ಸಾಗಿಸುತ್ತಿದ್ದ ವೇಳೆ ಸಿದ್ದಾಪುರ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ಲಾಸ್ಟಿಕ್ ಹೊದಿಕೆಯನ್ನು ಹಾಕಿಕೊಂಡು ನಾಟಾಗಳನ್ನು ತುಂಬಿರುವ ಲಾರಿ (ಕೆ.ಎ 28 ಸಿ 1484) ಯನ್ನು ಪೊಲೀಸರು ವಶಕ್ಕೆ ಪಡೆದು ಸಾರಿಗೆ ಇಲಾಖೆಗೆ ಒಪ್ಪಿಸಿದ್ದಾರೆ.