ಮಡಿಕೇರಿ, ಜು. 4: ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ ಜಿಲ್ಲೆಯಲ್ಲಿ 2018 ರ ಆಗಸ್ಟ್ ಮಾಹೆಯಲ್ಲಿ ಉಂಟಾದ ಪ್ರಾಕೃತಿಕ ವಿಕೋಪದಿಂದ ನಷ್ಟ ಅನುಭವಿಸಿದ ಸಂತ್ರಸ್ತರಿಗೆ ಸಹಕಾರಿಗಳಿಂದ ಪರಿಹಾರ ವಿತರಣಾ ಕಾರ್ಯಕ್ರಮವು ತಾ. 8 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕೊಡವ ಸಮಾಜದಲ್ಲಿ ನಡೆಯಲಿದೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಪಿ. ಗಣಪತಿ, ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ, ಬೆಂಗಳೂರು ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‍ನ ಸಿಇಓ ಡಾ. ಕೇಟೋಳಿ ಸಿ. ಯತೀಶ್ ಕುಮಾರ್, ಉಪಾಧ್ಯಕ್ಷರು ಮತ್ತು ಆಡಳಿತ ಮಂಡಳಿಯ ನಿರ್ದೇಶಕರುಗಳು ಇತರರು ಪಾಲ್ಗೊಳ್ಳಲಿದ್ದಾರೆ.