ಮಡಿಕೇರಿ, ಜು. 4: ಭಾರತೀಯ ಜನತಾ ಪಾರ್ಟಿಯ ಮಡಿಕೇರಿ ತಾಲೂಕು ಸದಸ್ಯತ್ವ ಅಭಿಯಾನ ಸಂಬಂಧ ತಾ. 5 ರಂದು (ಇಂದು) ಬೆಳಿಗ್ಗೆ 11 ಗಂಟೆಗೆ; ಕಾರ್ಯಕರ್ತರ ಸಭೆಯು ಜನರಲ್ ತಿಮ್ಮಯ್ಯ ವೃತ್ತ ಬಳಿ ಇರುವ ಬಿಜೆಪಿ ಕಚೇರಿಯಲ್ಲಿ ನಡೆಯಲಿದೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ತಳೂರು ಕಿಶೋರ್ ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.