ಮಡಿಕೇರಿ, ಜು. 4: ದೇಶದಲ್ಲಿ ಅಲ್ಪಸಂಖ್ಯಾತರು ಮತ್ತು ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ.) ವತಿಯಿಂದ ನಗರದ ಇಂದಿರಾ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ಎಸ್.ಡಿ.ಪಿ.ಐ. ಜಿಲ್ಲಾಧ್ಯಕ್ಷ ಟಿ.ಹೆಚ್. ಅಬೂಬಕರ್, ಎಸ್.ಡಿ.ಪಿ.ಐ. ಜಿಲ್ಲಾ ಉಪಾಧ್ಯಕ್ಷ ಕೆ.ಜೆ. ಪೀಟರ್, ನಗರಾಧ್ಯಕ್ಷ ಮನ್ಸೂರ್, ಕಾರ್ಯದರ್ಶಿ ರಿಯಾಜ್, ಪಿ.ಎಫ್.ಐ. ಕಾರ್ಯದರ್ಶಿ ಇಬ್ರಾಹಿಂ ಹಾಜರಿದ್ದರು.