ಗೋಣಿಕೊಪ್ಪಲು, ಜು. 4: ಕೊಡಗು ಜಿಲ್ಲಾ ಪಂಚಾಯಿತಿ, ವೀರಾಜಪೇಟೆ ತಾಲೂಕು ಪಂಚಾಯಿತಿ, ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಹಾಗೂ ಕ್ಲೀನ್ ಕೂರ್ಗ್ ಇವರ ವತಿಯಿಂದ ತಾ. 6 ರಂದು ಮುಂಜಾನೆ ಗೋಣಿಕೊಪ್ಪ ಕಾವೇರಿ ಕಾಲೇಜಿನಿಂದ ಪೊನ್ನಂಪೇಟೆಯ ಪದವಿಪೂರ್ವ ಕಾಲೇಜುವರೆಗೆ ಸ್ವಚ್ಛಮೇವ ಜಯತೆ ಜನಾಂದೋಲನ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಜಾಗೃತಿ ಓಟ 2019 ನಡೆಯಲಿದೆ.

ಶಾಸಕ ಕೆ.ಜಿ. ಬೋಪಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷ ಸಿ.ಕೆ. ಬೋಪಣ್ಣ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಶ್ರೀಜಾ ಸಾಜಿ ಅಚ್ಚುತ್ತನ್, ತಾಲೂಕು ಪಂಚಾಯಿತಿ ಅಧ್ಯಕೆÀ್ಷ ಸ್ಮಿತ ಪ್ರಕಾಶ್, ಉಪಾಧ್ಯಕ್ಷ ನೆಲ್ಲೀರ ಚಲನ್, ತಾಲೂಕು ಪಂಚಾಯಿತಿ ಸದಸ್ಯೆ ಆಶಾ ಪೂಣಚ್ಚ, ಪೊನ್ನಂಪೇಟೆ ಶ್ರೀ ರಾಮಕೃಷ್ಣ ಆಶ್ರಮದ ಸ್ವಾಮೀಜಿ ಗಳಾದ ಬೋಧಸ್ವರೂಪನಂದಾಜೀ, ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮೂಕಳೇರ ಸುಮಿತಾ, ಉಪಾಧ್ಯಕ್ಷೆ ಮಂಜುಳ ಸುರೇಶ್, ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೆಲ್ವಿ, ಅರುವತ್ತೊಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ತೀತಮಾಡ ಸುಗುಣ ಸೋಮಯ್ಯ, ಭಾಗವಹಿಸಲಿದ್ದಾರೆ.

ಕೊಡಗು ಪರಿವರ್ತನ ಮೇಳ

ಸ್ವಚ್ಛತೆಯ ಸಾಧನೆಗೆ ಪರ್ಯಾಯ ಮಾರ್ಗಗಳ ಅನ್ವೇಷಣೆ ಮತ್ತು ಮಾರಾಟ ಮೇಳವು ಪೊನ್ನಂಪೇಟೆಯ ಸರ್ಕಾರಿ ಜೂನಿಯರ್ ಕಾಲೇಜ್ ಸಭಾಂಗಣದಲ್ಲಿ ಅಂದು ಬೆಳಿಗ್ಗೆ 10 ಗಂಟೆಗೆ ಕೊಡಗು ಪರಿವರ್ತನ ಮೇಳ ನಡೆಯಲಿದೆ. ಕಾರ್ಯಕ್ರಮದಲ್ಲಿ ಕೊಡಗು ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಮೇಳವನ್ನು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೂಕಳೇರ ಸುಮಿತಾ ಗಣೇಶ್ ವಹಿಸಲಿದ್ದಾರೆ. ಕೊಡಗು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಪ್ರತಾಪ್ ಸಿಂಹ, ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷ ಸಿ.ಕೆ. ಬೋಪಣ್ಣ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿಯ ಅಧ್ಯಕ್ಷೆ ಸರೋಜಮ್ಮ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಶ್ರೀಜಾ ಸಾಜಿ ಅಚ್ಚುತ್ತನ್, ವೀರಾಜಪೇಟೆ ತಾಲೂಕು ಪಂಚಾಯಿತಿ ಅಧ್ಯಕ್ಷೆ ಸ್ಮಿತ ಪ್ರಕಾಶ್, ಉಪಾಧ್ಯಕ್ಷ ನೆಲ್ಲೀರ ಚಲನ್, ಪೊನ್ನಂಪೇಟೆ ಪಂಚಾಯಿತಿ ಉಪಾಧ್ಯಕ್ಷೆ ಮಂಜುಳ ಸುರೇಶ್, ಪೊನ್ನಂಪೇಟೆ ತಾಲೂಕು ಪಂಚಾಯಿತಿ ಸದಸ್ಯೆ ಆಶಾ ಪೂಣಚ್ಚ ಭಾಗವಹಿಸಲಿದ್ದಾರೆ.