ಕುಶಾಲನಗರ, ಜು. 4: ಕುಶಲ ಅರ್ಚಕರ ಸಂಘದ ಆಶ್ರಯದಲ್ಲಿ ಕುಶಾಲನಗರ ಸೋಮೇಶ್ವರ ದೇವಾಲಯದಲ್ಲಿ ಮಳೆಗಾಗಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ದೇವಾಲಯದಲ್ಲಿ ಬೆಳಗ್ಗೆ 8 ಗಂಟೆಯಿಂದ ಶತರುದ್ರ ಪಾರಾಯಣ, ಶತರುದ್ರಾಭಿಷೇಕ, ರುದ್ರಹೋಮ, 12 ಗಂಟೆಗೆ ಪೂರ್ಣಾಹುತಿ ನಂತರ ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಕುಶಾಲನಗರ ಸೇರಿದಂತೆ ಸುತ್ತಮುತ್ತ ವ್ಯಾಪ್ತಿಯ ದೇವಾಲಯಗಳ ಅರ್ಚಕರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕುಶಲ ಅರ್ಚಕರ ಸಂಘದ ಅಧ್ಯಕ್ಷ ಪರಮೇಶ್ವರ್ ಭಟ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೋಮೇಶ್ವರ ದೇವಾಲಯ ಸಮಿತಿ ಅಧ್ಯಕ್ಷರಾದ ಎಂ.ಕೆ.ದಿನೇಶ್, ಕುಶಾಲನಗರ ದೇವಾಲಯ ಒಕ್ಕೂಟ ಸಮಿತಿ ಪದಾಧಿಕಾರಿಗಳು, ವಿವಿಧ ದೇವಾಲಯಗಳ ಆಡಳಿತ ಸಮಿತಿ ಸದಸ್ಯರು, ಸಂಘಸಂಸ್ಥೆಗಳ ಪ್ರಮುಖರು ಭಕ್ತಾದಿಗಳು ಇದ್ದರು.