ಕುಶಾಲನಗರ, ಜು. 4: ಕುಶಾಲನಗರ ಬೈಚನಹಳ್ಳಿ ಶ್ರೀ ಮುತ್ತಪ್ಪ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಡಾಂಬರೀಕರಣಕ್ಕೆ ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೂಮಿಪೂಜೆ ನೆರವೇರಿಸಿದರು. ಅಂದಾಜು ರೂ. 5 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕಾಮಗಾರಿಯ ಗುಣಮಟ್ಟ ಕಾಪಾಡಿಕೊಳ್ಳುವಂತೆ ಶಾಸಕರು ಸೂಚನೆ ನೀಡಿದರು.

ಈ ಸಂದರ್ಭ ಜಿ.ಪಂ. ಸದಸ್ಯೆ ಮಂಜುಳಾ, ಪ.ಪಂ. ಸದಸ್ಯರಾದ ಪ್ರಮೋದ್ ಮುತ್ತಪ್ಪ, ಖಲೀಮುಲ್ಲಾ, ಮುತ್ತಪ್ಪ ದೇವಾಲಯ ಸೇವಾ ಸಮಿತಿಯ ಅಧ್ಯಕ್ಷರಾದ ವರದ, ಪ್ರಮುಖರಾದ ಕೆ.ಕೆ. ದಿನೇಶ್, ನಗರ ಬಿಜೆಪಿ ಅಧ್ಯಕ್ಷ ಕೆ.ಜಿ. ಮನು, ವಿ.ಡಿ. ಪುಂಡರೀಕಾಕ್ಷ, ಜಿ.ಎಂ. ಗಣಿಪ್ರಸಾದ್ ಮತ್ತಿತರರು ಇದ್ದರು.