ಮಡಿಕೇರಿ, ಜು. 5: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ತಾ.6 ರಂದು (ಇಂದು) ಬೆಳಗ್ಗೆ 10 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್‍ರಾಂ ಅವರ 33 ನೇ ‘ಪರಿನಿರ್ವಾಣ’ ಕಾರ್ಯಕ್ರಮ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ ಅವರು ತಿಳಿಸಿದ್ದಾರೆ.