ಸೋಮವಾರಪೇಟೆ, ಜು. 5: ಕೊಡಗು ಜಿಲ್ಲಾ ಪಂಚಾಯಿತಿಯ ಸ್ವಚ್ಛಮೇವ ಜಯತೆ ಕಾರ್ಯಕ್ರಮದ ಜಾಗೃತಿ ರಥ ಸಮೀಪದ ಹಾನಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಿ ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿತು.

ಪಂಚಾಯಿತಿ ಆವರಣದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷೆ ರೇಣುಕ ವೆಂಕಟೇಶ್, ಅಭಿವೃದ್ಧಿ ಅಧಿಕಾರಿ ರವೀಶ್ ಅವರುಗಳು ಪರಿಸರ ಸ್ವಚ್ಛತೆಯ ಬಗ್ಗೆ ಮಾತನಾಡಿದರು. ನಂತರ ಯಡೂರು ಸರ್ಕಾರಿ ಶಾಲೆಗೆ ತೆರಳಿದ ಜಾಗೃತಿ ರಥದ ಮೂಲಕ ಶಾಲಾ ವಿದ್ಯಾರ್ಥಿಗಳಿಗೆ ಪರಿಸರ, ಶಾಲಾ ಆವರಣ ಸ್ವಚ್ಛತೆ, ಹಸಿಕಸ ಹಾಗೂ ಒಣಕಸದ ವಿಂಗಡಣೆ, ಬಯಲು ಶೌಚದ ಬಗ್ಗೆ ಪ್ರಮುಖರು ಜಾಗೃತಿ ಮೂಡಿಸಿದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ್, ಯಶಾಂತ್‍ಕುಮಾರ್, ಪಂಚಾಯಿತಿ ಸಿಬ್ಬಂದಿಗಳು, ಯಡೂರು ಶಾಲಾ ಮುಖ್ಯ ಶಿಕ್ಷಕಿ ಪ್ರೇಮಾ ಸೇರಿದಂತೆ ಇತರರು ಪಾಲ್ಗೊಂಡಿದ್ದರು.