ಮಡಿಕೇರಿ, ಜು. 5: ಪ್ರಸಕ್ತ 2019-20ನೇ ಸಾಲಿನಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಕಲಾವಿದರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಾಗೂ ಜನಸಾಮಾನ್ಯರಿಗೆ ಕಲೆ ಹಾಗೂ ಸಂಸ್ಕøತಿ ಪರಿಚಯಿಸುವ ನಿಟ್ಟಿನಲ್ಲಿ ವಿವಿಧ ಕಲಾ ಪ್ರಕಾರಗಳಲ್ಲಿ ಪರಿಣತಿ ಹೊಂದಿದವರಿಗೆ ಇಲಾಖೆಯ ಸಹಭಾಗಿತ್ವದಲ್ಲಿ ಪ್ರದರ್ಶನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸರಕಾರ ನಿಗದಿಪಡಿಸಿದ ದರಗಳಲ್ಲಿ ಪ್ರಾಯೋಜಕತ್ವ ನೀಡಲಾಗುವದು.
ಆಸಕ್ತ ಕಲಾವಿದರು ಅರ್ಜಿ ಸಲ್ಲಿಸಲು ಸರಕಾರದ ಸೇವಾ ಸಿಂಧು ಸೌಲಭ್ಯ ಬಳಸಿಕೊಳ್ಳಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕೊಠಡಿ ಸಂಖ್ಯೆ 12, 2ನೇ ಮಹಡಿ ಜಿಲ್ಲಾಡಳಿತ ಭವನ ಇಲ್ಲಿ ಸಂಪರ್ಕಿಸಬಹುದಾಗಿದೆ.