ಮಡಿಕೇರಿ, ಜು. 5: ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸ್ನೇಹ ಸಿ.ವಿ. ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಡಾ.ಸ್ನೇಹ ಅವರು ಈ ಹಿಂದೆ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ದಲ್ಲಿ ಮುಖ್ಯ ಆಡಳಿತ ಅಧಿಕಾರಿಯಾಗಿ, ಅಬಕಾರಿ ಇಲಾಖೆಯಲ್ಲಿ ಅಪರ ಆಯುಕ್ತರಾಗಿ (ಆಡಳಿತ), ಮಂಡ್ಯ ಜಿಲ್ಲೆಯ ಜಿಲ್ಲಾ ಪಂಚಾಯಿತಿಯಲ್ಲಿ ಉಪ ಕಾರ್ಯದರ್ಶಿಯಾಗಿ, ತುಮಕೂರು ಜಿಲ್ಲೆಯಲ್ಲಿ ಭೂ ಸ್ವಾಧೀನ ಅಧಿಕಾರಿಯಾಗಿ, ರಾಮನಗರ ಜಿಲ್ಲೆಯಲ್ಲಿ ಉಪ ವಿಭಾಗಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.