ಶನಿವಾರಸಂತೆ, ಜು. 6: ಸಮೀಪದ ಕೊಡ್ಲಿಪೇಟೆಯ ಯೂನಿಟ್ ಎಸ್.ಕೆ.ಎಸ್.ಎಸ್.ಎಫ್. ಶಾಖಾ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಶಾಖೆಯ 20ಕ್ಕೂ ಅಧಿಕ ಕಾರ್ಯಕರ್ತರು ಆರೋಗ್ಯ ಕೇಂದ್ರದ ಸುತ್ತಮುತ್ತಲಿನ ಪರಿಸರದಲ್ಲಿ ಗಿಡಗಂಟಿ, ಮುಳ್ಳು ಪೊದೆಗಳನ್ನು ಕಡಿದು ಸ್ವಚ್ಛಗೊಳಿಸಿ ಶ್ರಮದಾನ ಮಾಡಿದರು. ಆರಂಭದಲ್ಲಿ ಸ್ವಚ್ಛತಾ ಕಾರ್ಯಕ್ರಮ ಉದ್ಘಾಟಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ತುಂಗಾ ಮಾತನಾಡಿ, ಪರಿಸರ ಸ್ವಚ್ಛತೆ ಪ್ರತಿ ನಾಗರಿಕನ ಆದ್ಯ ಕರ್ತವ್ಯವಾಗಿದೆ ಎಂದರು.
ಎಸ್.ಕೆ.ಎಸ್.ಎಸ್.ಎಫ್. ಜಿಲ್ಲಾ ಸಂಘಟನಾಕಾರ ನೆಫಲ್ ಮಾತನಾಡಿದರು. ತಾಲೂಕು ವೈದ್ಯಕೀಯ ಶಿಕ್ಷಣಾಧಿಕಾರಿ ಶಾಂತಿ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ನವೀನ್, ಕವಿತಾ, ಎಸ್.ವೈ.ಎಸ್. ಜಿಲ್ಲಾ ಘಟಕದ ಅಧ್ಯಕ್ಷ ಇಬ್ರಾಹಿಂ ಮಳ್ಳಳ್ಳಿ, ಖಜಾಂಚಿ ಸಿದ್ದೀಕ್ ಹಾಜಿ, ಕಾರ್ಯದರ್ಶಿ ಮಹಮ್ಮದ್ ಅಲಿ, ಸದಸ್ಯ ಅಬ್ದುಲ್ ರಹಮಾನ್ ಹಾಗೂ ಕಾರ್ಯಕರ್ತರು ಹಾಜರಿದ್ದರು.