ಮಡಿಕೇರಿ, ಜು. 6: ಪೊಲೀಸ್ ಇಲಾಖೆ ವತಿಯಿಂದ ಇಂದು ಮಡಿಕೇರಿಯ ಫೀ.ಮಾ. ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಬಳಕೆಯ ವಿರೋಧದ ಬಗ್ಗೆ ಹಾಗೂ ಸಂಚಾರಿ ನಿಯಮಗಳ ಪಾಲನೆಯ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ನಗರ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಅವರು ಮಾದಕ ವಸ್ತು ಬಳಕೆ, ದುಶ್ಚಟದ ನಿರ್ಮೂಲನೆಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಹೇಳಿದರು. ಸಂಚಾರಿ ನಿಯಮ ಪಾಲನೆಯ ಕುರಿತು ಅಗತ್ಯ ವಿವರ ನೀಡಿದ ಅವರು, ವಿದ್ಯಾರ್ಥಿಗಳ ಕರ್ತವ್ಯ, ಡ್ರೆಸ್‍ಕೋಡ್ ಮತ್ತಿತರ ವಿಚಾರಗಳ ಬಗ್ಗೆ ಸೂಚ್ಯವಾಗಿ ವಿವರಿಸಿ ತಪ್ಪುದಾರಿಯಲ್ಲಿ ನಡೆದರೆ ಶಿಕ್ಷೆಯ ಎಚ್ಚರಿಕೆ ನೀಡಿದರು.
ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲ ಟಿ.ಡಿ. ತಿಮ್ಮಯ್ಯ, ನಗರ ಸಂಚಾರಿ ಠಾಣೆಯ ಎ.ಎಸ್.ಐ. ಮಹದೇವಯ್ಯ ಮತ್ತಿತರರು ಪಾಲ್ಗೊಂಡಿದ್ದರು.