ಮಡಿಕೇರಿ, ಜು. 7: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಡಿಕೇರಿ ನಗರದ ಸಂಪಿಗೆಕಟ್ಟೆಯಿಂದ ಮಹದೇವಪೇಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಬಿರುಕು ಬಿಟ್ಟಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ದುರಸ್ತಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ನಗರಸಭಾ ಆಯುಕ್ತರು ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶದ ಅಭಿಯಂತರರು ಹಾಜರಿದ್ದರು.