ಮಡಿಕೇರಿ, ಜು. 7: ಕೊಡಗು ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘವನ್ನು ವಿಸರ್ಜಿಸಿರುವದರಿಂದ ಜಿಲ್ಲಾ ಸಂಘದ ಬದಲು ಆಯಾ ತಾಲೂಕು ಸಂಘದ ಮೂಲಕ ಕಾರ್ಯಚಟುವಟಿಕೆಗಳು ನಡೆಯಲಿವೆ ಎಂದು ಮಡಿಕೇರಿ ತಾಲೂಕು ಸಂಘದ ಅಧ್ಯಕ್ಷೆ ವಿ.ಹೆಚ್. ನಾಗರತ್ನ ತಿಳಿಸಿದ್ದಾರೆ.
ಇತ್ತೀಚಿಗೆ ನಡೆದ ತಾಲೂಕು ಸಂಘದ ಸಭೆಯಲ್ಲಿ ಜಿಲ್ಲಾ ಸಂಘ ಇಲ್ಲದೇ ಇರುವದರಿಂದ ತಾಲೂಕು ಸಂಘದ ಮೂಲಕವೇ ಕಾರ್ಯಕ್ರಮಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.