ನಾಪೆÇೀಕ್ಲು, ಜು. 7: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ಪ್ರಮುಖವಾದುದು ಎಂದು ನಿವೃತ್ತ ಪ್ರಾಂಶುಪಾಲ ಕಲಿಯಾಟಂಡ ಪೂಣಚ್ಚ ಹೇಳಿದರು. ಇಲ್ಲಿನ ಶ್ರೀ ರಾಮಟ್ರಸ್ಟ್ ವತಿಯಿಂದ ಏರ್ಪಡಿಸಲಾಗಿದ್ದ ಪಾಲಕ ಪೋಷಕರ ಸಭೆಯಲ್ಲಿ ಅವರು ಮಾತನಾಡಿದರು. ಪೋಷಕರು ತಮ್ಮದೇ ಕೆಲಸ ಕಾರ್ಯಗಳಲ್ಲಿ ಮಗ್ನರಾಗಿ ವಿದ್ಯಾರ್ಥಿಗಳತ್ತ ಗಮನಹರಿಸುತ್ತಿಲ್ಲ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರು ತೊಡಗಿಸಿಕೊಳ್ಳುವದು ಅತ್ಯಗತ್ಯ ಎಂದರು. ಸಂಸ್ಥೆಯ ಅಧ್ಯಕ್ಷರಾದ ಬೊಪ್ಪಂಡ ಜಾಲಿ ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಂಸ್ಥೆಯ ಪ್ರಾಂಶುಪಾಲರಾದ ಬಿ.ಎಂ.ಶಾರದಾ ಸ್ವಾಗತಿಸಿದರು.ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಶಿಕ್ಷಕ ಕಾಳಯ್ಯ ಮಾಹಿತಿ ನೀಡಿದರು. ಶಿಕ್ಷಕ ಭಗವತಿ ಪ್ರಸಾದ್ ವಂದಿಸಿದರು. ಸಭೆಯಲ್ಲಿ ಆಡಳಿತ ಮಂಡಳಿ ನಿರ್ದೆಶಕರು ಉಪಸ್ಥಿತರಿದ್ದರು. ಪೋಷಕರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.