ನಾಪೆÇೀಕ್ಲು, ಜು. 7: ಕಕ್ಕಬ್ಬೆ ಪಟ್ಟಣದಿಂದ ಪೈನರಿ ದರ್ಗಾಕ್ಕಾಗಿ ಕುಂಜಿಲಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಕಿರು ಸೇತುವೆ ಕುಸಿದುಬಿದ್ದ ಪರಿಣಾಮ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.
ಸದ್ಯಕ್ಕೆ ಕಾಲ್ನಡಿಗೆಯಲ್ಲಿ ಜನ ಈ ರಸ್ತೆಯಲ್ಲಿ ಸಂಚರಿಸುತ್ತಿದ್ದು, ಅದು ಸ್ಥಗಿತಗೊಳ್ಳುವ ಭೀತಿ ಉಂಟಾಗಿದೆ. ಈ ಸೇತುವೆ ಕುಸಿತದಿಂದ ಈ ಭಾಗದ ಶಾಲಾ, ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ತೊಂದರೆಯಾಗಿದ್ದು, ಸಂಬಂಧಿಸಿದವರು ಕೂಡಲೇ ರಸ್ತೆ ಸಂಚಾರಕ್ಕೆ ಕ್ರಮಕೈಗೊಳ್ಳಬೇಕೆಂದು ಕುಂಜಿಲ - ಕಕ್ಕಬ್ಬೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವಯಕೋಲ್ ಉಸ್ಮಾನ್ ಮನವಿ ಮಾಡಿದ್ದಾರೆ.