ಶ್ರೀಮಂಗಲ, ಜು. 8: ಕೇವಲ ಇಂಗ್ಲೀಷ್ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದರೆ ಮಾತ್ರ ಉನ್ನತ ಸ್ಥಾನ ವನ್ನು ಪಡೆಯಬಹುದು, ಸಾಧನೆ ಮಾಡಬಹುದು ಎಂಬ ಭ್ರಮೆಯಿಂದ ಪೋಷಕರು ಹೊರಬರಬೇಕು ಹಾಗೂ ವಿದ್ಯಾರ್ಥಿಗಳು ಇಂತಹ ಕೀಳರಿಮೆಯನ್ನು ಬಿಡಬೇಕು. ಕನ್ನಡ ಮಾಧ್ಯಮದಲ್ಲಿ ಓದಿದ ಸಾಕಷ್ಟು ಮಂದಿ ಉನ್ನತ ಸ್ಥಾನವನ್ನು ಅಲಂಕರಿಸಿದಲ್ಲ್ಲದೇ ಸಮಾಜದಲ್ಲಿ ಆದರ್ಶಪ್ರಾಯರಾಗಿ ಜೀವನವನ್ನು ನಡೆಸಿದ್ದಾರೆ ಎಂದು ಉದ್ಯಮಿ ಕದ್ದಣಿಯಂಡ ಹರೀಶ್ ಬೋಪಣ್ಣ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪೆÇನ್ನಂಪೇಟೆ ಸಮೀಪ ಬೆಕ್ಕೆಸುಡ್ಲೂರು ಶಾರದ ಹೈಸ್ಕೂಲ್‍ನ ಶಾಲಾ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಇಂದು ಕನ್ನಡ ಮಾಧ್ಯಮದಲ್ಲಿ ಓದುವಂತಹ ವಿದ್ಯಾರ್ಥಿಗಳು ಕಾರ್ಮಿಕ ವರ್ಗ ಮತ್ತು ಆರ್ಥಿಕವಾಗಿ ಹಿಂದುಳಿದ ವರು. ಆದರೆ ಹಿಂದಿನ ಕಾಲದಲ್ಲಿ ಪ್ರತಿಯೊಬ್ಬರು ಕನ್ನಡ ಮಾಧ್ಯಮದಲ್ಲೇ ವಿದ್ಯಾಭ್ಯಾಸವನ್ನು ಮಾಡಿ ಉನ್ನತ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ. ತಂದೆ ತಾಯಿಗಳು ಕಷ್ಟಪಟ್ಟರೂ ತಮ್ಮ ಮಕ್ಕಳು ಉನ್ನತ ಭವಿಷ್ಯವನ್ನು ಪಡೆಯಬೇಕೆಂಬ ಬಯಕೆಯಿಂದ ನಿಮಗಳಿಗೆ ಶಿಕ್ಷಣವನ್ನು ನೀಡುತ್ತಿದ್ದಾರೆ ಇದರ ಸದುಪ ಯೋಗವನ್ನು ಮಾಡಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ತಾವು ಮಾನ್ಯ ಉಸ್ತುವಾರಿ ಸಚಿವ ಸೀತಾರಾಮ್ ಅವರ ಅಪ್ತ ಕಾರ್ಯದರ್ಶಿಯಾಗಿದ್ದ ಸಂದರ್ಭದಲ್ಲಿ ಕೊಡಗಿನ ಮಣ್ಣಿಗೆ ತನ್ನ ಕರ್ತವ್ಯ ಎಂಬಂತೆ ಹಲವು ಅನುದಾನಗಳನ್ನು ಬಿಡುಗಡೆ ಮಾಡುವ ಅವಕಾಶ ಒದಗಿಬಂದಿದ್ದು ಇದೇ ರೀತಿ ಈ ಶಾಲೆಯ ಅವರಣ ನಿರ್ಮಾಣಕ್ಕೆ ರೂ. 3 ಲಕ್ಷಗಳ ಅನುದಾನವನ್ನು ಒದಗಿಸಲಾಗಿದೆ. ಮುಂದಿನ ದಿನಗಳಲ್ಲಿ ಇಲ್ಲಿಯ ಮಕ್ಕಳ ವಿದ್ಯಾಬ್ಯಾಸಕ್ಕೆ ಬೇಕಾದ ನೆರವು ನೀಡುವ ಭರವಸೆಯನ್ನು ನೀಡಿದರು.

ಮಂದತ್ತವ್ವ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಮಾಚಿಮಾಡ ರವೀಂದ್ರ ಮಾತನಾಡಿ, ಶಾರದ ಹೈಸ್ಕೂಲ್ ದಿ. ಕೊಳ್ಳಿಮಾಡ ಕರುಂಬಯ್ಯ ಅವರ ಕನಸ್ಸಿನ ಕೂಸು.

1958ರಲ್ಲಿ ಸಂಸದರಾಗಿದ್ದ ಸಂದರ್ಭದಲ್ಲಿ ಈ ಶಾಲೆಯನ್ನು ನಿರ್ಮಾಣ ಮಾಡಿ ಈ ಭಾಗದ ಜನರಿಗೆ ಶಿಕ್ಷಣ ಕ್ರಾಂತಿಯನ್ನು ಮಾಡಿದ್ದಾರೆ.

ಈ ಶಾಲೆಯಲ್ಲಿ ಶಿಕ್ಷಣವನ್ನು ಪೂರೈಸಿದ ಸಾಕಷ್ಟು ಮಂದಿ ಇಂದು ಉನ್ನತ್ತ ಸ್ಥಾನವನ್ನು ಅಲಂಕರಿಸಿದ್ದಾರೆ. ಶಾಲೆ ಪ್ರಾರಂಭ ವಾಗಿ ಇಷ್ಟು ವರ್ಷಗಳಾದರೂ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ನೂರಕ್ಕೆ ನೂರು ಫಲಿತಾಂಶ ಬರಲಿಲ್ಲ. ಆದರೆ ಈ ಬಾರಿ ಎಲ್ಲಾ ಶಿಕ್ಷಕರ ಕಠಿಣ ಪರಿಶ್ರಮದಿಂದ ಶಾಲೆ ಶೇ 100 ಫÀಲಿತಾಂಶವನ್ನು ಪಡೆದುಕೊಂಡಿದೆ. ಇದನ್ನು ಹೀಗೆ ಮುಂದುವರಿಸಿ ಕೊಂಡು ಹೋಗುವಂತೆ ಕರೆ ನೀಡಿದರು.

ಸಾರ್ವಜನಿಕ ಹಿತರಕ್ಷಣಾ ಸಮಿತಿಯ ಜಿಲ್ಲಾ ಕಾರ್ಯದರ್ಶಿ ಗಳಾದ ಅರಮಣಮಾಡ ಸತೀಶ್ ದೇವಯ್ಯ ಮಾತನಾಡಿ ವಿದ್ಯಾರ್ಥಿ ಸಂಘ ವಿದ್ಯಾರ್ಥಿಗಳ ಬದುಕನ್ನು ಬದಲಿಸುವ ಒಂದು ಹಂತ. ನಾಯಕತ್ವದ ಗುಣ ನಿಮ್ಮಲ್ಲಿ ಮೂಡಲು ಇದರಿಂದ ಸಾಧ್ಯ. ಭವಿಷ್ಯವನ್ನು ಉಜ್ವಲಿಸುವ ದೃಷ್ಟಿಯಿಂದ ವಿದ್ಯಾರ್ಥಿಗಳು ಕಠಿಣ ಪರಿಶ್ರಮವನ್ನು ಪಟ್ಟು ಉತ್ತಮ ವಿದ್ಯಾರ್ಥಿಗಳಾಗಿ ಸಮಾಜಕ್ಕೆ ಉತ್ತಮ ಪ್ರಜೆಗಳಾಗಿ ಮೂಡಿಬರುವಂತೆ ತಿಳಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಡಳಿತ ಮಂಡಳಿಯ ಅಧ್ಯಕ್ಷ ಕಾಟಿಮಾಡ ಜಿಮ್ಮಿ ಅಣ್ಣಯ್ಯ ಅವರು ವಹಿಸಿದ್ದರು. ವೇದಿಕೆಯಲ್ಲಿ ಅಡಳಿತ ಮಂಡಳಿಯ ಕಾರ್ಯದರ್ಶಿ ಮಾಚಿಮಾಡ ರವೀಶ್, ಉಪಾಧ್ಯಕ್ಷರಾದ ಪಾಪಯ್ಯ ಹಾಗೂ ನಿರ್ದೇಶಕರಾದ ಕುಞ್ಞಮಾಡ ಸತೀಶ್, ಚಿರಿಯಪಂಡ ನಾಣಯ್ಯ, ಮಾಚಿಮಾಡ ಪ್ರಸಾದ್, ಚೆಪ್ಪುಡೀರ ನಂಜಪ್ಪ, ಕಾಡ್ಯಮಾಡ ಭರತ್, ದೇಯಂಡ ತಿಮ್ಮಯ್ಯ, ಮುಖ್ಯ ಶಿಕ್ಷರಾದ ಬಸವರಾಜ್, ಕೃಷ್ಣನಾಯಕ್ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ತಿಮ್ಮಯ್ಯ ನಿರ್ವಹಿಸಿದರು. ವಿದ್ಯಾರ್ಥಿ ನಾಯಕರುಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.